
ಕಾರವಾರ; ಭಾರೀ ಮಳೆ ಹಿನ್ನಲೆ ಜಿಲ್ಲೆಯ ಕರಾವಳಿ ತಾಲ್ಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ತಾಲ್ಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೆ ಜಿಲ್ಲಾಧಿಕಾರಿಗಳು ಜು.23 ( ಇಂದು) ರಜೆ ಘೋಷಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಉಲ್ಲೇಖ (1) ರನ್ವಯ ನೀಡಿರುತ್ತಾರೆ. ಉಲ್ಲೇಖ 3 ರ ತಹಶೀಲ್ದಾರರ ಮೌಖಿಕ ಕೋರಿಕೆಯಂತೆ ಮತ್ತು ಉಲ್ಲೇಖ 4 ರ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ ರವರ ಪತ್ರದಂತೆ ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಜಿಲ್ಲೆಯ, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ, ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮೇಲೆ ತಿಳಿಸಿದ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ, ಪ್ರೌಡ ಶಾಲೆ ಮತ್ತು ಅಂಗನವಾಡಿಗಳಿಗೆ ದಿನಾಂಕ: 23-07-2025 ರಂದು ಮಾತ್ರ ರಜೆ ಘೋಷಿಸುವ ಬಗ್ಗೆ ಈ ಕೆಳಗಿನಂತೆ ಆದೇಶ ಮಾಡಿದೆ.
ವಿಸ್ಮಯ ನ್ಯೂಸ್ ವಿಲಾಸ್ ನಾಯಕ ಅಂಕೋಲಾ