Join Our

WhatsApp Group
Important
Trending

ಅಂದರ್-ಬಾಹರ್ ಅಡ್ಡೆ ಮೇಲೆ ದಾಳಿ: 49 ಲಕ್ಷ ಹಣ ವಶಕ್ಕೆ

ಶಿರಸಿ: ಅಂದರ್-ಬಾಹರ್ ಇಸ್ಪೀಟ್ ಅಡ್ಡೆ ಮೇಲೆ ಇಲ್ಲಿನ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ನೆಡೆಸಿ ಭರ್ಜರಿ ಬೇಟೆಯಾಡಿದ್ದಾರೆ. ಸುಮಾರು 49 ಲಕ್ಷ ನಗದು, ನಾಲ್ಕು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಯಲ್ಲಾಪುರ ಹೆದ್ದಾರಿಯ ಬೈರುಂಬೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಗಸಾಲ ಗ್ರಾಮದ ಹೋಮ್ ಸ್ಟೇ ಮೇಲೆ ದಾಳಿ ನಡೆಸಿ, ಈ ಕಾರ್ಯಾಚರಣೆ ನಡೆಸಲಾಗಿದೆ.

ಕಾರ್ಯಾಚರಣೆ ವೇಳೆ ಅಕ್ರಮವಾಗಿ ಅಂದರ್ ಬಾಹರ್ ಆಡುತಿದ್ದ 19 ಜನರನ್ನ ವಶಕ್ಕೆ ಪಡೆದು 49 ಲಕ್ಷ ನಗದು, ನಾಲ್ಕು ಕಾರುಗಳು ಹಾಗೂ 15 ಮೊಬೈಲ್, ಇಸ್ಪೀಟ್ ಕಾರ್ಡ್ಗಳನ್ನ ವಶಕ್ಕೆ ಪಡೆಯಲಾಗಿದೆ. ಎಸ್ಪಿ ದೀಪನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಗೀತಾ ಪಾಟೀಲ್ ನೇತ್ರತ್ವದ ತಂಡ ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆದಿದೆ. ಬಂಧಿತರು ಹಾವೇರಿ, ದಾವಣಗೆರೆ ಮೂಲದವರು ಎನ್ನಲಾಗಿದ್ದು, ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್. ಶಿರಸಿ

Back to top button