
ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ: 17-08-2025 ರಿಂದ 19-06-2025 ರ ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ (ರೆಡ್ ಅಲರ್ಟ್) ನೀಡಿದೆ. ಹೀಗಾಗಿ ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಜಿಲ್ಲೆಯ ಕಾರವಾರ, ಅಂಕೋಲಾ ಕುಮಟಾ ಹೊನ್ನಾವರ, ಭಟ್ಕಳ.ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು ಮಕ್ಕಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ: ರೀಲ್ಸ್ ಮಾಡಿ 15 ಸಾವಿರ ಗೆಲ್ಲಿ
ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮೇಲಿನ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು ದಿನಾಂಕ:18-8-2025 ರಂದು ಮಾತ್ರ ರಜೆ ಘೋಷಿಸುವ ಬಗ್ಗೆ ಈ ಕೆಳಗಿನಂತೆ ಅದೇಶ ಮಾಡಿ ಜಿಲ್ಲಾಧಿಕಾರಿಗಳು ಅದೇಶ ಹೊರಡಿಸಿದ್ದಾರೆ.
ಆದೇಶ: ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 (ಎಮ್) ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ ಕುಮಟಾ ಹೊನ್ನಾವರ, ಭಟ್ಕಳ.ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ. ದಾಂಡೇಲಿ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜು ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ದಿನಾಂಕ: 18-8-2025 ರಂದು ರಜೆ ಘೋಷಿಸಿ ಆದೇಶಿಸಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್