
ಕುಮಟಾ: ಕಾಂಗ್ರೆಸ್ ಮುಖಂಡ ಮತ್ತು ಯಶಸ್ವಿ ಉದ್ಯಮಿ ಯಶೋಧರ ನಾಯ್ಕ (69) ಅವರು ಇಂದು ಮುಂಬೈನಲ್ಲಿ ಕೊನೆಯುಸಿರೆಳೆದರು. ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇದೀಗ ಮೃತಪಟ್ಟಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಾಳ್ಕೊಡ ಮೂಲದವರಾಗಿದ್ದ ನಾಯ್ಕ ಅವರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಮೈಸೂರಿನಲ್ಲಿ ನೆಲೆಸಿ, ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದರು. ಯಶೋಧರ ನಾಯ್ಕ ಟ್ರಸ್ಟ್ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದರು. ಆದರೆ, ರಾಜಕೀಯದಲ್ಲಿ ತಮ್ಮ ಛಾಪು ಮೂಡಿಸಲು ಪ್ರಯತ್ನಿಸಿದರೂ, ಅದು ಸಾಧ್ಯವಾಗಿರಲಿಲ್ಲ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್