
ಕಾರವಾರ: ಲಿಂಗನಮಕ್ಕಿ ಜಲಾಶಯದಿಂದ 11 ಗೇಟ್ ತೆರೆದು 15 ಸಾವಿರ ಕ್ಯೂಸೆಕ್ ನೀರನ್ನು ಇಂದು ಹೊರಕ್ಕೆ ಬಿಡಲಾಗಿದೆ. ಜಲಾಶಯ ನಿನ್ನೆ ದಿನ ಶೇ .93 ರಷ್ಟು ಭರ್ತಿಯಾಗಿತ್ತು. 48,393 ಕ್ಯೂಸೆಕ್ ನೀರು ಒಳ ಹರಿವು ಇದ್ದು, 142 ಟಿ.ಎಂಸಿ ನೀರು ಸಂಗ್ರಹವಾಗಿತ್ತು . ಸಂಪೂರ್ಣ ಭರ್ತಿಯಾಗಿದ್ದರಿಂದ 11 ಕ್ರಸ್ಟ್ ಗೇಟ್ ಗಳನ್ನು ಮೇಲೆತ್ತಿ 15 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ.
ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು ಶರಾವತಿ ನದಿಗೆ ಹೆಚ್ಚಿನ ನೀರು ಹರಿದುಬರುತ್ತಿದೆ. ಈ ಹಿನ್ನಲೆಯಲ್ಲಿ ನೀರನ್ನು ಹೊರಬಿಡಲಾಗಿದೆ. ಇನ್ನು ನೀರು ಬಿಟ್ಟ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಭಾಗದ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ನದಿ ಭಾಗದ ತಗ್ಗು ಪ್ರದೇಶ ದಲ್ಲಿ ಪ್ರವಾಹದ ಎಚ್ಚರಿಕೆಯನ್ನು ಉತ್ತರ ಕನ್ನಡ ಜಿಲ್ಲಾಡಳಿತ ನೀಡಿದೆ.
ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ