Follow Us On

Google News
Big News
Trending

ಮಹಿಳೆ ಶೌಚಾಲಯಕ್ಕೆ ತೆರಳಿದ ವೇಳೆ ಕಿಟಕಿಯಲ್ಲಿ ಇಣುಕಿ ನೋಡುತ್ತಿದ್ದವನಿಗೆ ಧರ್ಮದೇಟು

ಕುಮಟಾ ಹೊಸ ಬಸ್ ನಿಲ್ದಾಣದಲ್ಲಿ ಘಟನೆ
ಮೊಬೈಲ್ ನಲ್ಲಿ ವಿಡಿಯೋ ಚಿತ್ರಿಸಿ ವಿಕೃತಿ
ಗೋಕರ್ಣ ಮೂಲದ ಆರೋಪಿ ಪೊಲೀಸರ ವಶಕ್ಕೆ

[sliders_pack id=”1487″]

ಕುಮಟಾ: ಹೊಸ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯದ ಒಳಗಡೆಯಿದ್ದ ಮಹಿಳೆಯ ವಿಡಿಯೋ ಮಾಡಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕುಮಟಾದಲ್ಲಿ ನಡೆದಿದೆ. ಮಹಿಳೆಯೊಬ್ಬಳು ಕುಮಟಾದ ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ್ದಳು.

.ಈ ವೇಳೆ ವ್ಯಕ್ತಿಯೊಬ್ಬ ಹಿಂಬದಿಯ ಕಿಟಕಿಯಿಂದ ಇಣುಕಿ ನೋಡಿರುವುದು ಕಂಡುಬoದಿದೆ. ಅಲ್ಲದೆ, ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಿದ್ದ ಎನ್ನಲಾಗಿದೆ. ಕೂಡಲೇ ಮಹಿಳೆ ಕಿರುಚಿಕೊಂಡಿದ್ದಾಳೆ.

ಮಹಿಳೆಯ ಕೂಗಾಟ ನೋಡಿದ ಸಾರ್ವಜನಿಕರು ಮತ್ತು ಸಾರಿಗೆ ಸಿಬ್ಬಂದಿ ಆಗಮಿಸಿದ್ದಾರೆ. ಈ ವೇಳೆ ಆರೋಪಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ, ಸಾರ್ವಜನಿಕರು ಮತ್ತು ಸಾರಿಗೆ ಸಿಬ್ಬಂದಿ ಸೇರಿ ವಿಕೃತಿ ಮೆರೆದ ವ್ಯಕ್ತಿಯನ್ನು ಹಿಡಿದಿದ್ದಾರೆ. ಆತನಿಗೆ ಸರಿಯಾಗಿ ಧರ್ಮದೇಟು ನೀಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಕುಮಟಾ ಪೊಲೀಸ್ ಠಾಣೆಯಲ್ಲಿ ಈ ಸಂಬoಧ ಪ್ರಕರಣ ದಾಖಲಾಗಿದ್ದು, ಆರೋಪಿ ಬಳಿಯಿದ್ದ ಮೊಬೈಲ್ ಮತ್ತು ಕಾರನ್ನು ವಶಕ್ಕೆ ಪಡೆದಿದ್ದಾರೆ. ಈತ ಮಂಕಿಯಲ್ಲಿ ಫಾರೆಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದ್ದು, ಗೋಕರ್ಣದ ನಿವಾಸಿ ಎಂದು ತಿಳಿದುಬಂದಿದೆ.

ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್

ಇದನ್ನೂ ಓದಿ: ಪ್ರಮುಖ ಸುದ್ದಿಗಳು

Back to top button