ಕಾರವಾರ: ಜಿಲ್ಲೆಯಲ್ಲಿ ಸೆಪ್ಟಂಬರ್ 20ರಿಂದ 21ರವರೆಗೆ ಭಾರಿ ಮಳೆ ಬೀಳುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಸಾರ್ವಜನಿಕರು, ಪ್ರವಾಸಿಗರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆ ತುರ್ತುಸೇವೆಗೆ ಟೋಲ್ ಪ್ರಿ ಸಂಖ್ಯೆ: 24*7 ಕಂಟ್ರೋಲ್ ರೂಮ್-1077, ವಾಟ್ಸಪ್ ನಂಬರ್-9483511015ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್