Join Our

WhatsApp Group
Info
Trending

ಜಿಲ್ಲೆಯಲ್ಲಿಂದು 158 ಕೇಸ್ ದಾಖಲು: 455 ಮಂದಿ ಗುಣಮುಖ

455 ಮಂದಿ ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿಂದು ಏಳು ಸಾವು
ಶಿರಸಿಯಲ್ಲಿ 213 ಮಂದಿ ಡಿಸ್ಚಾರ್ಜ್

[sliders_pack id=”1487″]

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 158 ಕರೊನಾ ಕೇಸ್ ದಾಖಲಾಗಿದೆ. ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ದಾಖಲಾದಂತೆ ಕಾರವಾರ 45, ಅಂಕೋಲಾ 10, ಕುಮಟಾ 15, ಶಿರಸಿ 7, ಯಲ್ಲಾಪುರ 6, ಮುಂಡಗೋಡ 59, ಹಳಿಯಾಳ 13 ಮತ್ತು ಜೋಯ್ಡಾದಲ್ಲಿ ಮೂರು ಕೇಸ್ ದೃಢಪಟ್ಟಿದೆ.

ಇದೇ ವೇಳೆ ಇಂದು ಜಿಲ್ಲೆಯಾದ್ಯಂತ 455 ಮಂದಿ ಬಿಡುಗಡೆಯಾಗಿದ್ದಾರೆ. ಅಂಕೋಲಾ 15, ಕುಮಟಾ 45, ಹೊನ್ನಾವರ 47, ಭಟ್ಕಳ 45, ಶಿರಸಿ 213, ಸಿದ್ದಾಪುರ 21, ಯಲ್ಲಾಪುರ 51, ಮುಂಡಗೋಡ 16, ಹಳಿಯಾಳದಲ್ಲಿ ಇಬ್ಬರು ಡಿಸ್ಚಾರ್ಜ್ ಆಗಿದ್ದಾರೆ.

ಜಿಲ್ಲೆಯಲ್ಲಿಂದು ಏಳು ಮಂದಿ ಸಾವು:

ಜಿಲ್ಲೆಯಾದ್ಯಂತ ಇಂದು ಏಳು ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 110ಕ್ಕೆ ಏರಿಕೆಯಾಗಿದೆ. ಕಾರವಾರ 2, ಅಂಕೋಲಾ 1, ಕುಮಟಾ 3 ಮತ್ತು ಹಳಿಯಾಳದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಇಂದು 158 ಕೇಸ್ ದೃಢಪಟ್ಟ ಬೆನ್ನಲ್ಲೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8,555ಕ್ಕೆ ಏರಿಕೆಯಾಗಿದೆ. 852 ಮಂದಿ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1,102 ಸಕ್ರೀಯ ಪ್ರಕರಣಗಳಿವೆ.

ಕಾಲೇಜು ಪ್ರಾರಂಭಕ್ಕೆ ಡೇಟ್ ಫಿಕ್ಸ್

ಕರೊನಾ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟಿದ್ದ ಶೈಕ್ಷಣಿಕ ವರ್ಷದ ಕಾಲೇಜು ತರಗತಿ ನವೆಂಬರ್ 1ರಿಂದ ಶುರುವಾಗಲಿದೆ. ಅಕ್ಟೋಬರ್ 31ರ ಒಳಗೆ ಪ್ರಥಮ ವರ್ಷದ ಪದವಿ, ಸ್ನಾತಕೋತ್ತರ ಪದವಿ ತರಗತಿಗಳ ಅಡ್ಮಿಷನ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ನವೆಂಬರ್ 1ರಿಂದ ಕಾಲೇಜು ತರಗತಿಗಳು ಪ್ರಾರಂಭವಾಗಲಿದ್ದು, ಮೊದಲ ಸೆಮಿಸ್ಟರ್ ಪರೀಕ್ಷೆಗಳು ಮಾರ್ಚ್ 8 ರಿಂದ 23ರ ನಡುವೆ ನಡೆಯಲಿದೆ. ಎರಡನೇ ಸೆಮಿಸ್ಟರ್ ಏಪ್ರಿಲ್ 5 ರಿಂದ ಆರಂಭವಾಗಲಿದ್ದು, ಪರೀಕ್ಷೆಗಳು ಆಗಸ್ಟ್ನಲ್ಲಿ ನಡೆಯಲಿವೆ. ಕೇಂದ್ರ ಶಿಕ್ಷಣ ಸಚಿವರು ಈ ಮಾಹಿತಿ ನೀಡಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಇದನ್ನೂ ಓದಿ: ಪ್ರಮುಖ ಸುದ್ದಿಗಳು

Check Also
Close
Back to top button