Info
Trending

ಕೇಂದ್ರ ಸಚಿವರ ಬಲಿ ಪಡೆದ ಕರೊನಾ:ಚಿಕಿತ್ಸೆ ಫಲಿಸದೆ ಸಾವು

ಕೇಂದ್ರ ಸಚಿವ ಸುರೇಶ್​ ಅಂಗಡಿಯವರು ಕರೊನಾ ದಿಂದಾಗಿ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಕಳೆದ ಒಂದು ವಾರದ ಹಿಂದೆ ಅಂಗಡಿಯವರಿಗೆ ಕರೊನಾ ಪಾಸಿಟಿವ್ ಇರುವುದು ತಿಳಿದಿತ್ತು. ದೆಹಲಿಯ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೇ ಇಂದು ಉಸಿರಾಟದ ಸಮಸ್ಯೆ ಉಲ್ಭಣವಾದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ.

ಪ್ರಧಾನಿ‌‌ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.ಸುರೇಶ್​ ಅಂಗಡಿಯವರಿಗೆ 65 ವರ್ಷ ವಯಸ್ಸಾಗಿತ್ತು. 1955 ಜೂನ್ 1ರಂದು ಜನಿಸಿದ ಅಂಗಡಿಯವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿ ಸಂಸದರಾಗಿದ್ದರು.

ಬ್ಯೂರೋ ರಿಪೋರ್ಟ್‌ ವಿಸ್ಮಯ ನ್ಯೂಸ್

Back to top button