ಕೇಂದ್ರ ಸಚಿವ ಸುರೇಶ್ ಅಂಗಡಿಯವರು ಕರೊನಾ ದಿಂದಾಗಿ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಕಳೆದ ಒಂದು ವಾರದ ಹಿಂದೆ ಅಂಗಡಿಯವರಿಗೆ ಕರೊನಾ ಪಾಸಿಟಿವ್ ಇರುವುದು ತಿಳಿದಿತ್ತು. ದೆಹಲಿಯ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೇ ಇಂದು ಉಸಿರಾಟದ ಸಮಸ್ಯೆ ಉಲ್ಭಣವಾದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ.
ಪ್ರಧಾನಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.ಸುರೇಶ್ ಅಂಗಡಿಯವರಿಗೆ 65 ವರ್ಷ ವಯಸ್ಸಾಗಿತ್ತು. 1955 ಜೂನ್ 1ರಂದು ಜನಿಸಿದ ಅಂಗಡಿಯವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿ ಸಂಸದರಾಗಿದ್ದರು.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್