Follow Us On

WhatsApp Group
Important
Trending

ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಕಳ್ಳಸಾಗಣೆ: ಇಬ್ಬರ ಬಂಧನ

ತಪ್ಪಿಸಿಕೊoಡು ಇನ್ನಿಬ್ಬರು ಪಾರಾರಿ
ಜಿಲ್ಲೆಯಲ್ಲಿ ಸಕ್ರೀಯವಾಗಿದ್ಯಾ ಬೆಲೆಬಾಳುವ ಮರಗಳ ಕಳ್ಳಸಾಗಣೆ ಜಾಲ?

ಬನವಾಸಿ: ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರನ್ನು ಶಿರಸಿಯ ಬನವಾಸಿಯಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಬೆಲೆಬಾಳುವ ಗಂಧದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಉಳಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.


ಶಿವಮೊಗ್ಗ ಸೊರಬದಿಂದ ಬನವಾಸಿ ಕಡೆಗೆ ಕಾರ್ ನಲ್ಲಿ ಗಂಧದ ತುಂಡುಗಳನ್ನು ಹಾಕಿಕೊಂಡು ಶಿರಸಿ ಕಡೆಗೆ ಆರೋಪಿಗಳು ಬರುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಬನವಾಸಿ ಪೊಲೀಸರು ಕಾರ್ಯಾಚರಣೆಗಿಳಿದು, ಕಾರನ್ನು ತಡೆದು ತಪಾಸಣೆ ಮಾಡಿದ ಶ್ರೀಗಂಧದ ತುಂಡುಗಳ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ.

ಬಂಧಿತರಿoದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 6 ಗಂಧದ ತುಂಡುಗಳನ್ನು ಹಾಗೂ ಸಾಗಾಣಿಕೆಗೆ ಬಳಸಿದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹೇಶ್ ಗುಡಿಗಾರ , ಗಣೇಶ ಗುಡಿಗಾರ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದ್ದು, ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


ಜಿಲ್ಲೆಯಲ್ಲಿ ಸಕ್ರೀಯವಾಗಿದ್ಯಾ ಮರಗಳ್ಳತನ ಮಾಫಿಯಾ?

ಕಳೆದ ಎರಡುದಿನಗಳ ಹಿಂದೆ ಕುಮಟಾ ತಾಲೂಕಿನ ಕತಗಾಲ್ ಅರಣ್ಯದಲ್ಲಿ ಬೆಳೆದ ಬೆಲೆಬಾಳುವ ಸಾಗವಾನಿ ಮರವನ್ನ ಕಡಿದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರೂ ಆರೋಪಿಗಳನ್ನ ಬಂಧಿಸಿರುವ ಘಟನೆ ನಡೆದಿತ್ತು. ಖಚಿತ ಮಾಹಿತಿ ಮೇಲೆ ದಾಳಿ ಕತಗಾಲ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದರು. ಅಲ್ಲದೆ, ಕೆಲವು ದಿನಗಳ ಹಿಂದೆ ಶಿರಸಿಯಲ್ಲಿ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದವರನ್ನು ಬಂಧಿಸಿ, ಗಂಧದ ತುಂಡುಗಳನ್ನು ವಶಕ್ಕೆ ಪಡೆಯಲಾಗಿತ್ತು.


ಇದನ್ನೆಲ್ಲ ನೋಡಿದ್ರೆ ಜಿಲ್ಲೆಯಲ್ಲಿ ಬೆಲೆಬಾಳುವ ಮರಗಳನ್ನು ಅಕ್ರಮವಾಗಿ ಕಡಿದು, ಸಾಗಿಸುವ ಜಾಲ ಸಕ್ರೀಯವಾಗಿ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಅರಣ್ಯಾಧಿಕಾರಿಗಳು ಈ ಬಗ್ಗೆ ಮತ್ತಷ್ಟು ತನಿಖೆ ನಡೆಸಿ, ಈ ಜಾಲವನ್ನು ಬೇಧಿಸಬೇಕಿದೆ.


ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button