Big News
Trending

ರೆಡ್ ಅಲರ್ಟ್ ಘೋಷಣೆ: ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಕಾರವಾರ ಆಗಸ್ಟ್ 27 : ಉತ್ತರಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇದೇ ವೇಳೆ, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಮತ್ತಷ್ಟು ಮಳೆಯಾಗುವ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲಿ ಜಿಲ್ಲೆಯಾದ್ಯಂತ ಆಗಸ್ಟ್ 28, 2025ರಂದು ಕುಮಟಾ, ಹೊನ್ನಾವರ, ಭಟ್ಕಳ, ಕಾರವಾರ, ಅಂಕೋಲಾ,ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಮತ್ತು ದಾಂಡೇಲಿ ತಾಲ್ಲೂಕುಗಳಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗಳು, ಅಂಗನವಾಡಿಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಈ ಕ್ರಮ

ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗು ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹೌದು, ಮಕ್ಕಳಿಗೆ ಅನಾನುಕೂಲವಾಗದಂತೆ ಮತ್ತು ಯಾವುದೇ ಅಹಿತಕರ ಘಟನೆಗಳು ಸಂಭವಿಸದoತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ರಜೆಯನ್ನು ಘೋಷಿಸಲಾಗಿದೆ. ಪೋಷಕರು ಮತ್ತು ವಿದ್ಯಾರ್ಥಿಗಳು ಸಹಕರಿಸುವಂತೆ ಜಿಲ್ಲಾಡಳಿತ ಕೋರಿದೆ.

ಸದ್ರಿ ಆದೇಶವನ್ನು, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ/ಶಿರಸಿ ರವರು ಕಾರ್ಯ ರೂಪಕ್ಕೆ ತರುವಂತೆ ಸೂಚಿಸಲಾಗಿದೆ.

ಮುರ್ನಾಲ್ಕು ದಿನಗಳ ಕಾಲ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ ಏನು?

ಇನ್ನೊಂದೆಡೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯಾದ್ಯಂತ ಆಗಸ್ಟ್ 31ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ಮುರ್ನಾಲ್ಕು ದಿನಗಳ ಕಾಲ ಮಳೆ ಇರಲಿದ್ದು, ಗಣೇಶ ಚತುರ್ಥಿಯ ಸಂಭ್ರಮ-ಸಡಗರಕ್ಕೆ ಸ್ವಲ್ಪ ಹಿನ್ನಡೆಯಾಗುವ ಸಾಧ್ಯತೆಯಿದೆ ಹೆಚ್ಚಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button