
ಜೊಯಿಡಾ: ತಾಲೂಕಿನ ವಿರ್ನೋಲಿ ವಲಯದ ಜನತಾಕಾಲೋನಿಯಲ್ಲಿ ಜಿಂಕೆ ಬೇಟೆಯಾಡಿದ 3 ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರಿoದ 16 ಕೆ.ಜಿ ಜಿಂಕೆ ಮಾಂಸ ವಶಪಡಿಸಿಕೊಳ್ಳಲಾಗಿದೆ.
ಪ್ರಕರಣ ಸಂಬoಧ ಜೊಯಿಡಾ ತಾಲುಕಿನ ಜನತಾ ಕಾಲೋನಿ ನಿವಾಸಿಗಳಾದ ಸಂದೀಪ 36 ವರ್ಷ, ಪರಶುರಾಮ ಅಡಾವ 27 ವರ್ಷ,ಗೋಪಾಲ ಮೇದಾರ 29 ವರ್ಷ ಇವರುಗಳನ್ನು ಬಂಧಿಸಲಾಗಿದೆ. ಇವರಿಂದ 16 ಕೆಜಿ ಜಿಂಕೆ ಮಾಂಸ ವಶಪಡಿಸಿಕೊಳ್ಳಲಾಗಿದೆ. ಇನ್ನಷ್ಟು ಆರೋಪಿಗಳು ಈ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಈ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಆರೋಪಿಗಳ ಮೇಲೆ ವನ್ಯ ಜೀವಿ ಕಾಯಿದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಕ್ಕೆ ಹಾಜರು ಪಡಿಸಲಾಗಿದೆ. ಹಳಿಯಾಳ ಡಿಸಿಎಪ್ ಅಜ್ಜಯ್ಯ ಜಿ.ಅರ್, ಎಸಿಎಪ್ ನಿಂಗಾಣಿ ಅವರ ಮಾರ್ಗದರ್ಶನದಲ್ಲಿ ವಿರ್ನೋಲಿ ವಲಯ ಅರಣ್ಯಾಧಿಕಾರಿ ಬಸವರಾಜ್, ಸಿಬ್ಬಂದಿಗಳಾದ ರಾಮುಗೌಡ,ಬೈಲಾ,ಬಸವನ ಗೌಡ,ಪ್ರವೀಣ ಮ್ಯಾಗೇರಿ, ಶ್ರೀಶೈಲ ಬಾರ್ಲಿ,ಸಂದೀಪ ಮುಂತಾದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು
ವಿಸ್ಮಯ ನ್ಯೂಸ್, ಜೋಯ್ಡಾ
ಇದನ್ನೂ ಓದಿ: ಇಂದಿನ ಪ್ರಮುಖ ಸುದ್ದಿಗಳು
- ಕರಾವಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಸಾವು
- SSLC ಯಲ್ಲಿ ಸಾಧನೆ ಮಾಡಿದ ರೈತ ಕುಟುಂಬದ ಕನ್ನಡದ ಕುವರಿಗೆ ಇಂಜಿನೀಯರ್ ಆಗೋ ಕನಸು: ಹೆಸರಿಗೆ ತಕ್ಕಂತೆ ಇದೆ ಗ್ರಾಮೀಣ ಭಾಗದ ಆದರ್ಶ ಪ್ರೌಢಶಾಲೆ
- ಯುದ್ಧ ಸಿದ್ಧತೆ ಹಿನ್ನಲೆ: ಉಪವಾಸ ಸತ್ಯಾಗ್ರಹ ಮುಂದಕ್ಕೆ
- ಅತ್ಯಂತ ಸುಸಜ್ಜಿತವಾದ ಮಳಿಗೆ ಮಾರಾಟಕ್ಕಿದೆ: ಕೂಡಲೇ ಸಂಪರ್ಕಿಸಿ
- ಮಿರ್ಜಾನಿನ ಆದಿಚುಂಚನಗಿರಿ ಇಂಡಿಪೆಂಡೆಂಟ್ ಪಿಯು ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಮೇ 10 ರಂದು ಪ್ರವೇಶ ದಾಖಲಾತಿ ಪರೀಕ್ಷೆ