ಮಾಹಿತಿ
Trending

ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

  • ಎದುರಿನಿಂದ‌ ಬಂದ ಲಾರಿಗೆ ಡಿಕ್ಕಿ
  • ಕಾರು ಸಂಪೂರ್ಣ ಜಖಂ
  • ಸ್ಥಳದಲ್ಲೇ ನಾಲ್ವರ ದುರ್ಮರಣ

ಯಲ್ಲಾಪುರ: ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 63 ಹೊಸಳ್ಳಿ ಬಳಿ ಕಾರು ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದೆಹಲಿಯ ಪಾಸಿಂಗ್ ಇರುವ ಕಾರು ಎದುರಿನಿಂದ ಬರುತ್ತಿರುವ ಲಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಅಪಘಾದಲ್ಲಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಅತೀ ವೇಗದ ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಎಲ್ಲರೂ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮೃತಪಟ್ಟವರಲ್ಲಿ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರ ಇದ್ದಾರೆ ಎನ್ನಲಾಗಿದೆ.ಯಲ್ಲಾಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು, ಸಾವನ್ನಪ್ಪಿದವರ ಶವಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ.

ವಿಸ್ಮಯ ನ್ಯೂಸ್ ಯಲ್ಲಾಪುರ

ಇದನ್ನೂ ಓದಿ: ಇಂದಿನ ಪ್ರಮುಖ ಸುದ್ದಿಗಳು

Related Articles

Back to top button