ಕುಮಟಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಗ್ಯಾಸ್ ಸೋರಿಕೆ ಹಿನ್ನಲೆ ಮುನ್ನೆಚ್ಚರಿಕೆ
ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ

ಕುಮಟಾ: ಗ್ಯಾಸ್ ತುಂಬಿದ ಟ್ಯಾಂಕರ್ ವೊಂದು ರಾಷ್ಟ್ರೀಯ ಹೆದ್ದಾರಿ ಎನ್.ಎಚ್ 66ರ ಹಂದಿಗೋಣ ಸಮೀಪದ ಪಲ್ಟಿಯಾಗಿದೆ. ಮಂಗಳೂರಿನಿoದ ಮುಂಬೈಗೆ ಗೆ ತೆರಳುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಟ್ಯಾಂಕರ್ ನಿಂದ ಸಣ್ಣ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ.©Copyright reserved by Vismaya tv


ಅನಿಲ ಸೋರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಗ್ಯಾಸ್ ಟ್ಯಾಂಕರ್ ಸಮೀಪ ಯಾರೂ ಹೋಗದಂತೆ ನಿರ್ಭಂದಿಸಲಾಗಿದೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಕಾರ್ಯಾಚರಣೆ ಆರಂಭಿಸಿದ್ದಾರೆ. ಅಲ್ಲದೆ, ಅನಿಲ ಸೋರಿಕೆ ಹಿನ್ನಲೆಯಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ©Copyright reserved by Vismaya tv


ಇದೇ ವೇಳೆ, ರಸ್ತೆಯಲ್ಲಿ ಅಡ್ಡವಾಗಿ ಟ್ಯಾಂಕರ್ ಬಿದ್ದ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಕಾರ್ಯಾಚರಣೆ ಮುಗಿದ ಬಳಿಕವೇ ವಾಹನ ಸಂಚಾರ ಆರಂಭಗೊಳ್ಳಲಿದೆ. ಸಂಜೆ ನಾಲ್ಕು ಗಂಟೆ ತನಕ ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತಗೊಳ್ಳಲಿದೆ ಎಂಬ ಮಾಹಿತಿ ಬಂದಿದೆ.

ಟ್ರಾಫಿಕ್ ಸಮಸ್ಯೆ ಹೆಚ್ಚಾದ ಹಿನ್ನಲೆಯಲ್ಲಿ ಚಂದಾವರ ಮಾರ್ಗವಾಗಿ ಮಂಗಳೂರು ಕಡೆಗೆ ವಾಹನ ಬಿಡಲು ವ್ಯವಸ್ಥೆ ಮಾಡಲಾಗಿದೆ.

ವಿಸ್ಮಯ ನ್ಯೂಸ್, ಯೋಗೇಶ್ ಮಡಿವಾಳ ಕುಮಟಾ

Exit mobile version