Follow Us On

WhatsApp Group
Important
Trending

ಗ್ಯಾಸ್ ಟ್ಯಾಂಕರ್ ಡಿಕ್ಕಿ: ತಂದೆ-ಮಗಳ ಸಾವು

ಗ್ಯಾಸ್ ಟ್ಯಾಂಕರ್ ಚಾಲಕನ ಅಜಾಗರುಕತೆ

ಯಲ್ಲಾಪುರ: ಇತ್ತಿಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣ ಹೆಚ್ಚುತ್ತಲೇ ಇದೆ. ತಾಲೂಕಿನ ಅರಬೈಲ್ ಗಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಗ್ಯಾಸ್ ಟ್ಯಾಂಕರ್ ಮುಂದೆ ಹೋಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದು, ಸ್ಕೂಟರ್ ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವಿನೋದ ಕಿಂದಳಕರ್ ಹಾಗೂ ಅವರ ಮಗಳು ಸುನೇಹಾ ಕಿಂದಳಕರ್ ಅಪಘಾತದಲ್ಲಿ ಮೃತಪಟ್ಟವರು ಎಂದು ತಿಳಿದುಬಂದಿದೆ. ಮಗಳನ್ನು ಊರಿಗೆ ಬಿಡಲು ಯಲ್ಲಾಪುರದಿಂದ ಅಂಕೋಲಾಕ್ಕೆ ಹೊರಟಿದ್ದವರು ಈಗ ದುರ್ಮರಣಕ್ಕಿಡಾಗಿದ್ದಾರೆ.


ಗ್ಯಾಸ್ ಟ್ಯಾಂಕರ್ ಚಾಲಕನ ಅಜಾಗರುಕತೆಯಿಂದಲೇ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಸಂಬoಧ ಚಾಲಕನ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಇದನ್ನೂ ಓದಿ: ಪ್ರಮುಖ ಸುದ್ದಿಗಳು

Back to top button