ಮಾಹಿತಿ
Trending

ಕೃತಕ ಗರ್ಭಧಾರಣಾ ಕಾರ್ಯಕರ್ತರ ಒಂದು ದಿನದ ಮಾಹಿತಿ ಕಾರ್ಯಾಗಾರ

ಶಿರಸಿ: ಹಾಲಿನ ಉತ್ಪಾದನೆಯ ಹೆಚ್ಚಳದಲ್ಲಿ ಕೃತಕ ಗರ್ಭಧಾರಣಾ ಕಾರ್ಯಕರ್ತರ ಕಾರ್ಯ ಶ್ಲಾಘನೀಯ ಹಾಗೂ ಇಂತಹ ಕೊರೊನಾ ಸಂದರ್ಭದಲ್ಲಿ ಅವರ ಸೇವೆ ಅವಿರತವಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಹಾಲು ಉತ್ಪಾದಕ ಸಂಘಗಳಿಗೆ ಕಟ್ಟಡ ಕಟ್ಟಿಸುವಲ್ಲಿ ಸರ್ಕಾರ ಮತ್ತು ಕ.ಹಾ.ಮ. ದೊಂದಿಗೆ ಚರ್ಚಿಸಿ ಕಾರ್ಯರೂಪಕ್ಕೆ ತರಲು ಸಂಪೂರ್ಣವಾಗಿ ಶ್ರಮಿಸುವುದಾಗಿ ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಸುರೇಶ್ಚಂದ್ರ ಕೆ ಹೆಗಡೆ ಕೆಶಿನ್ಮನೆ ತಿಳಿಸಿದರು.


ನಗರದ ಟಿ.ಎಂ.ಎಸ್ ಸಭಾಭವನದಲ್ಲಿ ಏರ್ಪಡಿಸಿದ್ದ ಧಾರವಾಡ ಹಾಲು ಒಕ್ಕೂಟದ ವತಿಯಿಂದ ಜಿಲ್ಲೆಯ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕರು ಮತ್ತು ಕೃತಕ ಗರ್ಭಧಾರಣಾ ಕಾರ್ಯಕರ್ತರ ಒಂದು ದಿನದ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ತಜ್ಞರು, ಆಧುನಿಕ ಕೃತಕ ಗರ್ಭಧಾರಣೆಯ ಕುರಿತು ಮಾಹಿತಿ ನೀಡಿದರು. ಅಲ್ಲದೆ, ರೈತರ ಕೆಲ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿ ಚರ್ಚಿಸಿದರು.

ಕಾರ್ಯಕ್ರಮದಲ್ಲಿ ಶಂಕರ ಪಿ ಹೆಗಡೆ ನಿರ್ದೇಶಕರು ಧಾರವಾಡ ಹಾಲು ಒಕ್ಕೂಟ, ಒಕ್ಕೂಟದ ವ್ಯವಸ್ಥಾಪಕರಾದ ಡಾ. ವಿರೇಶ ತರಲಿ, ಜಿಲ್ಲಾ ಮುಖ್ಯಸ್ಥರಾದ ಎಸ್ ಎಸ್ ಬಿಜೂರ್, ಧಾರವಾಡ ಹಾಲು ಒಕ್ಕೂಟದ ಶಿರಸಿ ಉಪ ವಿಭಾಗದ ಜಿಲ್ಲಾ ಮುಖ್ಯಸ್ಥರಾದ ಎಸ್.ಎಸ್ ಬಿಜೂರ್, ಪಶು ವೈದ್ಯಾಧಿಕಾರಿಗಳಾದ ಡಾ. ರಾಕೇಶ ಹಾಗೂ ಶಿರಸಿ ಉಪ ವಿಭಾಗದ ವಿಸ್ತರಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಪ್ರಮುಖ ಸುದ್ದಿಗಳು

Related Articles

Back to top button