Important
Trending

ಕಾಡು ಹಾಗಲಕಾಯಿ ತರಲು ಹೋಗಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

ಗಂಭೀರವಾಗಿ ಗಾಯಗೊಂಡರೂ ಹೆದರದ ವ್ಯಕ್ತಿ
ಮರವೇರಿ ಕುಳಿತು ಕರಡಿಯಿಂದ ಬಚಾಬ್

[sliders_pack id=”1487″]

ಮುಂಡಗೋಡ: ಕಾಡು ಹಾಗಲಕಾಯಿ ತರಲು ಹೋಗಿದ್ದ ವ್ಯಕ್ತಿಯ ಮೇಲೆ ಎರಡು ಕರಡಿಗಳು ದಾಳಿ ಮಾಡಿ, ಗಂಭೀರವಾಗಿ ಗಾಯಗೊಳಿಸಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ. ಬೆಳಿಗ್ಗೆ ಕಾಡಿಗೆ ತೆರಳಿ ತನ್ನ ಎತ್ತುಗಳನ್ನು ಹುಡುಕಿಕೊಂಡು, ಬರುತ್ತಿರುವಾಗ ಕಾಡು ಹಾಗಲಕಾಯಿ ಕೊಯ್ಯಲು ತೆರಳಿದ ವೇಳೆ ಕರಡಿ ಏಕಾಏಕಿ ದಾಳಿ ನಡೆಸಿದೆ. ತಲೆ, ಕೈ ಕಾಲುಗಳು ಸೇರಿ ಹಲವು ಕಡೆಗಳಲ್ಲಿ ಕಚ್ಚಿ ಗಾಯಗೊಳಿಸಿದೆ.


ಕರಡಿ ದಾಳಿಯಿಂದಾಗಿ ಗಂಭೀರವಾಗಿ ಗಾಯಗೊಳಿಸಿದರು ಹೆದರದ ಯುವಕ ಧೈರ್ಯದಿಂದ ಕರಡಿಗಳಿಂದ ತಪ್ಪಿಸಿಕೊಂಡು ಅರಣ್ಯದಲ್ಲಿಯೆ ಮರವನ್ನು ಹತ್ತಿ ಕುಳಿತಿದ್ದಾನೆ. ಈ ವೇಳೆ ತನ್ನ ಮೊಬೈಲ್ನಿಂದ ಗ್ರಾಮಸ್ಥರಿಗೆ ಕರೆ ಮಾಡಿ ಕರಡಿ ದಾಳಿಯ ಬಗ್ಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ತಾಲೂಕಾ ಆಸ್ಪತ್ರೆಗೆ ದಾಖಲಿಸಿದ್ದಾರೆ.


ಗಾಯಗೊಂಡ ವ್ಯಕ್ತಿಯನ್ನು ನ್ಯಾಸರ್ಗಿ ಗ್ರಾಮದ ನಿರಂಜನ್ ದಡೆದವರ ಎಂದು ಗುರುತಿಸಲಾಗಿದೆ. ಗಾಯಾಳು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button