ಗೋಕರ್ಣ: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ, ಭಕ್ತಾಧಿಗಳ ಇಷ್ಟಾರ್ಥ ಸಿದ್ಧಿಕ್ಷೇತ್ರವಾದ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಸೋಮವಾರದಿಂದ ಭಕ್ತರಿಗೆ ಆತ್ಮಲಿಂಗ ಸ್ಪರ್ಶ, ದರ್ಶನ ಹಾಗೂ ಪೂಜೆಗೆ ಅವಕಾಶ ನೀಡಲಾಗುತ್ತಿದೆ. ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿಂದ ಸಾರ್ವಜನಿಕ ದರ್ಶನ ಬಂದಾಗಿತ್ತು. ಶ್ರಾವಣ ಮಾಸದಲ್ಲಿ ಊರಿನ ಸಾರ್ವಜನಿಕರಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ನಂತರ ಒಂದು ತಿಂಗಳಿನಿಂದ ನಂದಿ ಮಂಟಪದವೆರೆಗೆ ಎಲ್ಲಾ ಭಕ್ತರಿಗೆ ದೇವರ ದರ್ಶನ ನೀಡಲಾಗಿತ್ತು, ಹೀಗೆ ಹಂತ ಹಂತವಾಗಿ ಭಕ್ತರಿಗೆ ಪ್ರವೇಶಾವಕಾಶ ಕಲ್ಪಿಸಿ ಇದೀಗ ಪೂರ್ಣ ಪ್ರಮಾಣದಲ್ಲಿ ಭಕ್ತರಿಗೆ ಅವಕಾಶ ನೀಡಲಾಗಿದೆ.
ಈಗಾಗಲೇ ಸುರಕ್ಷತಾ ಕ್ರಮಗಳಾದ ಸ್ಯಾನಿಟೈಸರ್, ಮಾಸ್ಕ್, ಸಾಮಾಜಿಕ ಅಂತರ ಹಾಗೂ ಥರ್ಮಲ್ ಸ್ಕ್ರೀನಿಂಗ್ ಮಾಡಿ ಒಳಬಿಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿಯೂ ಸಹ ಇದು ಕಂಡ್ಡಾಯವಾಗಿದೆ. ದೇವರ ದರ್ಶನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಮಾಡಿದ್ದು, ಪುರುಷರು ಧೋತಿ, ಪಂಚೆ, ಲುಂಗಿ ಧರಿಸಬೇಕಾಗಿದ್ದು, ಮಹಿಳೆಯರು ಚೂಡಿದಾರ, ಸೀರೆಯನ್ನು ಧರಿಸಿ ದೇವರ ದರ್ಶನ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.
ವಿಸ್ಮಯ ನ್ಯೂಸ್, ಗೋಕರ್ಣ
ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ
ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ