
ಕುಮಟಾ: ತಾಲೂಕ ಆಡಳಿತ ತಾಲೂಕು ಪಂಚಾಯತ್ ಹಾಗೂ ಪುರಸಭೆ ಕುಮಟಾ ಇವರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ ಕಾರ್ಯಕ್ರಮ ಕುಮಟಾ ತಾಲೂಕಿನ ಆಡಳಿತ ಸೌಧದಲ್ಲಿ ನಡೆಯಿತು. ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿ ಹಾಗೂ ಇತರ ಗಣ್ಯರು ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಮಾಜ ಸುಧಾರಕ ನಾರಾಯಣಗುರುಗಳ ಸಂದೇಶ
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ನಮ್ಮ ದೇಶದಲ್ಲಿ ಅನೇಕ ಮಹನೀಯರು ಪುಣ್ಯ ಪುರುಷರು ಹುಟ್ಟಿದ ದಿನವನ್ನು ಆಚರಿಕೊಂಡು ಬರುತ್ತಿದ್ದೇವೆ. ಇವರಲ್ಲಿ ಸ್ವಾಮೀ ವಿವೇಕಾನಂದ, ರಾಮಕೃಷ್ಣ ಪರಮಹಂಸ,ಡಾ. ಸರ್ವಪಲ್ಲಿ ರಾಧಾಕೃಷ್ಣನ್, ಮಹಾತ್ಮಾ ಗಾಂಧೀಜಿ, ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿಯೂ ಸಹ ಬಹಳ ಪ್ರಮುಖವಾಗಿದೆ. ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ ಕಾರ್ಯಕ್ರಮವನ್ನು ಬಹಳ ವರ್ಷಗಳ ನಂತರ ಆಚರಣೆಗೆ ತರಲಾಗಿದೆ.
ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದಿನ ಸಚಿವರಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿಯವರು ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ ಕಾರ್ಯಕ್ರಮವನ್ನು ಆಚರಣೆಗೆ ತಂದರು. ಅಂದಿನಿoದ ಇಂದಿನವರೆಗೂ ಸರ್ಕಾರ ಈ ಜಯಂತಿ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರುತ್ತಿದೆ. ಇಂತಹ ಮಹಾನ್ ಪುರುಷರ ಜಯಂತಿ ಕಾರ್ಯಕ್ರಮವನ್ನು ಆಚರಿಸುತ್ತಿರುವುದು ಒಳ್ಳೆಯ ಕಾರ್ಯವಾಗಿದೆ.
ವಿಶೇಷ ಉಪನ್ಯಾಸ
ಸಮಾಜದಲ್ಲಿನ ಅಸ್ಪೃಶ್ಯತೆಯ ವಿರುದ್ಧ ಹೋರಾಡಿ, ದೀನದಲಿತರು, ಹಿಂದುಳಿದವರು, ಮಹಿಳೆಯರ ಬದುಕಲ್ಲಿ ಬೆಳಕು ಮೂಡಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶವನ್ನು ಅಳವಡಿಸಿಕೊಂಡು ಮುನ್ನಡೆಯೋಣ ಎಂದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ರಾಮಚಂದ್ರ ಮಡಿವಾಳ ಅವರು ಬ್ರಹ್ಮಶ್ರೀ ನಾರಾಯಣಗುರುಗಳ ಬಗ್ಗೆ ವಿಷೇಶ ಉಪನ್ಯಾಸ ನೀಡಿದರು.
ಈ ವೇಳೆ ಕುಮಟಾ ತಹಶೀಲ್ದಾರ ಶ್ರೀ ಕೃಷ್ಣ ಕಾಮ್ಕರ್, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಜೇಂದ್ರ ಭಟ್, ಪುರಸಭಾ ಮುಖ್ಯಾಧಿಕಾರಿ ಎಮ್. ಆರ್ ಸ್ವಾಮಿ, ಕುಮಟಾ ನಾಮಧಾರಿ ಸಮಾಜದ ಅಧ್ಯಕ್ಷರಾದ ಮಂಜುನಾಥ ನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಆಡಳಿತ ಸೌಧದ ಸಿಬ್ಬಂದಿಗಳು ಹಾಜರಿದ್ದರು.
ವಿಸ್ಮಯ ನ್ಯೂಸ್ ದೀಪೇಶ ನಾಯ್ಕ ಕುಮಟಾ…