
ಕುಮಟಾ: ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ಉದ್ಯಾನವನದ ಹತ್ತಿರ ನೂತನವಾಗಿ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಅವರು ಇಂದಿರಾ ಕ್ಯಾಂಟೀನ್ ಉದ್ಘಾಟನೆಯನ್ನು ನೆರವೇರಿಸಿದರು. ನಂತರ ಅಲ್ಲಿ ತಯಾರಿಸಿದ ಆಹಾರವನ್ನು ಸ್ವೀಕರಿಸಿ ಶುಚಿ ರುಚಿಯ ಬಗ್ಗೆ ಅಲ್ಲಿನ ಸಿಬ್ಬಂದಿಗಳಿಗೆ ಅಗತ್ಯ ಮಾಹಿತಿ ನೀಡಿದರು.
ನಂತರ ನಡೆದ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಗಿಡಗಳಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಇದೊಂದು ವಿಷೇಶವಾದ ಕಾರ್ಯಕ್ರಮ. 2013 ರಿಂದ 2018 ರ ವರೆಗೆ ನಮ್ಮ ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರು ಇಡೀ ರಾಜ್ಯದಲ್ಲಿ ಎಲ್ಲಿಯೂ ಯಾರೂ ಉಪವಾಸ ಇರಬಾರದೆಂದು ಅವರಿಗೆ ಆಹಾರವನ್ನು ನೀಡುವ ಉದ್ದೇಶದಿಂದ 24 ಗಂಟೆಯ ಒಳಗಡೆ ಅಕ್ಕಿಯ ವಿತರಣೆ ಮಾಡಿದರು.
ಹಳ್ಳಿಗಳಿಂದ ಪಟ್ಟಣಕ್ಕೆ ಬಂದ ಜನ ಸಾಮಾನ್ಯರು ದುಬಾರಿ ಬೆಲೆ ತೆತ್ತು ಹೋಟೆಲ್ಗಳಲ್ಲಿ ಊಟೋಪಚಾರ ಮಾಡುವ ಪರಿಸ್ಥಿತಿಯಲ್ಲಿ ಇಲ್ಲದಿರುವುದನ್ನು ಮನಗಂಡು ಈ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಜಾರಿ ಮಾಡಿದರು. ಇಂದು ಈ ಯೋಜನೆ ಕುಮಟಾದಲ್ಲಿ ಆರಂಭಗೊoಡಿದೆ. ಇದರ ಪ್ರಯೋಜನವನ್ನು ಎಲ್ಲರೂ ಪಡೆದಿಕೊಳ್ಳಿ ಎಂದರು.
ಜಿಲ್ಲಾಧಿಕಾರಿ ಅವರು ಮಾತನಾಡಿ ಇಂದು ನಾವು ಅನೇಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಮಾಡಿಕೊಂಡು ಬಂದಿದ್ದೇವೆ. ಇಂದಿರಾ ಕ್ಯಾಂಟೀನ್ 2 ಫೇಸ್ ಗಳಲ್ಲಿ ನಮ್ಮ ಜಿಲ್ಲೆಯಲ್ಲಿ ಪ್ರಾರಂಭ ಮಾಡಲಾಗಿದೆ. ಫೆಸ್ 1 ರಲ್ಲಿ 7 ಕಡೆಗಳಲ್ಲಿ ಕಾರ್ಯಾರಂಭ ಮಾಡಲಾಗಿದೆ. ಫೇಸ್ 2ರಲ್ಲಿ 6 ಕಡೆಗಳಲ್ಲಿ ಇನ್ನು ಕಾರ್ಯ ನಿರ್ವಹಿಬೇಕಾಗಿದೆ. ಇಂದು ಕುಮಟಾದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಲಾಗಿದೆ. ಎಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಪ ಶಶಿ, ಕುಮಟಾ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಆರ್.ಎಲ್. ಭಟ್, ಕುಮಟಾ ತಹಶೀಲ್ದಾರ ಶ್ರೀಕೃಷ್ಣ ಕಾಮ್ಕರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿನಾಥ ಗಾಂವ್ಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿಸ್ಮಯ ನ್ಯೂಸ್ ದೀಪೇಶ ನಾಯ್ಕ ಕುಮಟಾ