Info
Trending

ಮೂರುದಿನ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಮಳೆಯ ಅಬ್ಬರ ಮತ್ತೆ ಹೆಚ್ಚಾಗುವ ಮುನ್ಸೂಚನೆ ದೊರೆತಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಅ.11 ರಂದು ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ವರದಿಗಳು ತಿಳಿಸಿದೆ.

ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಗ್ಗೆ ಅಗತ್ಯ ಕಾರ್ಯ ಮಾಡಿಕೊಳ್ಳುವಂತೆಯೂ ಸೂಚನೆ ನೀಡಲಾಗಿದೆ ಎಂಬ ಬಗ್ಗೆ ವರದಿಯಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Related Articles

Back to top button