ರಾಷ್ಟ್ರೀಯ ಹೆದ್ದಾರಿಯಿಂದ ಪಲ್ಟಿಹೊಡೆದು ಹೊಂಡಕ್ಕೆ ಬಿದ್ದ ಗ್ಯಾಸ್ ಟ್ಯಾಂಕರ್: ಗ್ರಾಮಸ್ಥರಲ್ಲಿ ಆತಂಕ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪಟ್ಟಣದ ನಿಶಾತ್ ನರ್ಸಿಂಗ್ ಹೋಮ್ ಸಮೀಪ ಖಾಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.
ಗೋವಾದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ
ಅಡುಗೆ ಅನಿಲ ತುಂಬುವ ಖಾಲಿ ಹಿಂದುಸ್ಥಾನ ಪೆಟ್ರೋಲಿಯಂ ಕಂಪನಿಗೆ ಸೇರಿದ (ಕೆಎ01,ಸಿ-9476) ಎನ್ನುವ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಇದ ಹೊಂಡ ಕ್ಕೆ ಪಲ್ಟಿಯಾಗಿ ಬಿದ್ದಿದೆ.
ಟ್ಯಾಂಕರ್ ಖಾಲಿ ಇದ್ದ ಕಾರಣ ಅನಾಹುತ ಸಂಭವಿಸಿಲ್ಲ. ಟ್ಯಾಂಕರನಲ್ಲಿ ಚಾಲಕ ಮಾತ್ರವಿದ್ದು ಚಾಲಕ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದು ಎನ್ನಲಾಗಿದೆ. ಟ್ಯಾಂಕರ್ ಅಪಘಾತ ಪ್ರಕರಣ ಹೆಚ್ಚುತ್ತಿದ್ದು, ಹೆದ್ದಾರಿ ಸುತ್ತಲಿನ ಗ್ರಾಮಸ್ಥರು ಆತಂಕಗೊoಡಿದ್ದರು.. ಟ್ಯಾಂಕರ್ ಪಲ್ಟಿಯಾಗಿದ್ದನ್ನು ನೋಡಿ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊoಡಿದ್ದು, ಖಾಲಿ ಟ್ಯಾಂಕರ್ ಎಂದು ತಿಳಿದು ನೆಮ್ಮದಿಯ ನಿಟ್ಟುಸಿರು ಬಿಟ್ಟರು.

ಸ್ಥಳಕ್ಕೆ ನಗರ ಠಾಣೆ ಪೋಲಿಸರು ತೆರಳಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ
- ಜಿಲ್ಲಾ ಮಟ್ಟದ ಪ್ರಥಮ ವರ್ಷದ ಹಾರ್ಡ್ ಬಾಲ್ ಕ್ರಿಕೆಟ್ ಟೂರ್ನಿ: ಕರ್ನಾಟಕ ಆರ್ಯ ಈಡಿಗ ನಾಮಧಾರಿ ಸಂಘ ಅಂಕೋಲಾದಿoದ ಆಯೋಜನೆ
- ನೀಲಗೋಡ ಜಾತ್ರೆ ಯಶಸ್ವಿಯಾಗಿ ಸಂಪನ್ನ: ಯಕ್ಷಿ ಚೌಡೇಶ್ವರಿ ದೇವಿಯ ದರ್ಶನ ಪಡೆದ ಅಪಾರ ಭಕ್ತರು
- Job: ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಉದ್ಯೋಗಾವಕಾಶ: ಇಂದೇ ಸಂಪರ್ಕಿಸಿ
- ಇಸ್ರೆಲ್ ನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ: 1 ಲಕ್ಷದ 70 ಸಾವಿರ ಸಂಬಳ
- ಏಪ್ರಿಲ್ 12 ರಂದು ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ ಶಿಪ್ ಪ್ರವೇಶಾತಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯುವ ಸುವರ್ಣಾವಕಾಶ