ಕೋವಿಡ್ ನಿಯಂತ್ರಣದಲ್ಲಿ ರಾಜ್ಯಕ್ಕೆ ಉತ್ತರಕನ್ನಡ ಪ್ರಥಮ ಸ್ಥಾನ

ಜಿಲ್ಲಾಡಳಿತಕ್ಕೆ ಆರೋಗ್ಯ ಸಚಿವರ ಶ್ಲಾಘನೆ
ಕರೋನಾ ವಾರಿಯರ್ಸ್’ಗೆ ಶಹಬ್ಬಾಸ್ ಉಸ್ತುವಾರಿ ಸಚಿವರು

[sliders_pack id=”1487″]

ಕಾರವಾರ: ಉತ್ತರಕನ್ನಡ ಜಿಲ್ಲೆಯು ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದೆ. ಈ ಕುರಿತು ರಾಜ್ಯ ಆರೋಗ್ಯ ಸಚಿವ ಡಾ. ಕೆ ಸುಧಾಕರ ಜಿಲ್ಲೆಯ ಎಲ್ಲ ಕರೋನಾ ವಾರಿಯರ್ಸ್ ಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ನಿಗದಿತ ಪ್ರಮಾಣಕ್ಕಿಂತಲೂ ಅಧಿಕವಾಗಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ ಜಿಲ್ಲೆಯಾದ್ಯಂತ ಸುಮಾರು 0.2 % ಕೊರೋನಾ ಪಾಸಿಟಿವ್ ಸಂಖ್ಯೆ ದಾಖಲಾಗಿದೆ.


ಸೋಂಕು ನಿಯಂತ್ರಿಸುವುದಕ್ಕೆ ಕಾರಣೀಕರ್ತವಾದ ಜಿಲ್ಲಾಡಳಿತಕ್ಕೆ, ವೈದ್ಯರಿಗೆ ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ, ಪ್ರತ್ಯೇಕ್ಷವಾಗಿ ಹಾಗೂ ಪರೋಕ್ಷವಾಗಿ ಶ್ರಮಿಸುತ್ತಿರುವ ಎಲ್ಲರಿಗೂ ಈ ಯಶಸ್ಸು ಸೇರಬೇಕು ಎಂಬ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ.


ನಮ್ಮ ಕಾರ್ಯವನ್ನು ಮೆಚ್ಚಿ ಪ್ರಶಂಸಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರಿಗೆ ತುಂಬು ಹೃದಯದ ಅಭಿನಂದನೆಗಳು ಎಂದು ಸಚಿವ ಹೆಬ್ಬಾರ್ ಹೇಳಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version