
ಯಲ್ಲಾಪುರ: ಎಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಕಾರ್ಡ್ ಬದಲಿಸಿ, ಹಣ ಡ್ರಾ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳನನ್ನು ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವೇಣುಗೋಪಾಲ ಕೃಷ್ಣ ರೆಡ್ಡಿ ಎಂದು ಗುರುತಿಸಲಾಗಿದೆ.
ಈತ 2019 ರ ಡಿಸೆಂಬರ್ ನಲ್ಲಿ ಯಲ್ಲಾಪುರದ ವ್ಯಕ್ತಿಯೋರ್ವರಿಗೆ ಎಟಿಎಂನಲ್ಲಿ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಅವರಿಂದ ಕಾರ್ಡ್ ಪಡೆದು, ಅದನ್ನು ಬದಲಿಸಿ ಬೇರೆ ಕಾರ್ಡನ್ನು ಅವರಿಗೆ ನೀಡಿದ್ದ. ನಂತರ ಅವರ ಕಾರ್ಡ್ ಬಳಸಿ 40,000 ರೂ ಹಣ ಡ್ರಾ ಮಾಡಿದ್ದ. ಈ ಕುರಿತು ಪ್ರಕರಣ ದಾಖಲಾಗಿತ್ತು.
ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆತನಿಂದ 18,880 ರೂ ನಗದು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಈತ ಗೌರಿಬಿದನೂರು, ಮಧುಗಿರಿ, ಬಾಗೇಪಲ್ಲಿ, ಮಡಿವಾಳ, ಆಂಧ್ರಪ್ರದೇಶದ ಚಿತ್ತೂರುಗಳಲ್ಲಿಯೂ ಈತನ ವಿರುದ್ಧ ಇದೇ ಮಾದರಿಯ ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ಬಹಿರಂಗಗೊಂಡಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಇದನ್ನೂ ಒದಿ: ಪ್ರಮುಖ ಸುದ್ದಿಗಳು
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ
- ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ
- ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ವಸತಿ ಸೌಲಭ್ಯ, ಆಕರ್ಷಕ ಸಂಬಳ
- ನಾಟಿ ವೈದ್ಯ ಬೆಳಂಬಾರದ ಹನುಮಂತಗೌಡರ ಮನೆಯಲ್ಲಿ ಹತ್ತು ಸಾವಿರ ಧನ್ವಂತರಿ ಜಪ, ಹೋಮಹವನ: ಸಮಸ್ತ ಜನರ ಆರೋಗ್ಯ ಸೌಭಾಗ್ಯಕ್ಕೆ ಪ್ರಾರ್ಥನೆ
- ಉಗ್ರರ ದಾಳಿ ಬಳಿಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುತ್ತಿರುವ ವ್ಯಾಪಾರಿಗಳು, ರೈತರು: ವೀಳ್ಯದೆಲೆ ರಪ್ತು ಮಾಡುವುದಿಲ್ಲ ಎಂದ ಬೆಳೆಗಾರರು