Follow Us On

WhatsApp Group
ಮಾಹಿತಿ
Trending

ದೀಪಾವಳಿಗೆ ಪಟಾಕಿ ನಿಷೇಧ: ಪ್ರಕಟವಾಯ್ತು ಮಹತ್ವದ ನಿರ್ಧಾರ

ಪಟಾಕಿ ಮಾರಾಟಾರರಿಗೆ & ಖರೀದಿಸಿದ್ದವರಿಗೆ ಶಾಕ್
ಶೀಘ್ರದಲ್ಲೇ ಸುತ್ತೊಲೆ ಪ್ರಕಟ

ಕರೊನಾ ಮಹಾಮಾರಿ ಎಲ್ಲಾ ಸಡಗರ ಸಂಭ್ರಮವನ್ನು ಕಿತ್ತುಕೊಳ್ಳುತ್ತಿದೆ. ಹೌದು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿ ದೀಪಾವಳಿಗೆ ಪಟಾಕಿಯನ್ನು ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಹೀಗಾಗಿ ಈ ಬಾರಿಯ ದೀಪಾವಳಿಯ ಹಬ್ಬದ ವೇಳೆ ಪಟಾಕಿ ಮಾರುವಂತಿಲ್ಲ ಮತ್ತು ಪಟಾಕಿ ಹಚ್ಚುವಂತಿಲ್ಲ. ಈ ಸಂಬAಧ ಸರ್ಕಾರ ಶೀಘ್ರವೇ ಸುತ್ತೋಲೆ ಹೊರಡಿಸಲಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ದೀಪಾವಳಿಗೆ ಯಾವುದೇ ರೀತಿಯ ಪಟಾಕಿಗೆ ಅವಕಾಶ ಇರೋದಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದಿಂದ ಪಟಾಕಿ ನಿಷೇಧಕ್ಕೆ ನಿರ್ಧಾರ ಮಾಡಲಾಗಿದೆ. ಅಲ್ಲದೆ ಪಟಾಕಿ ನಿಷೇಧಿಸಿ ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುವುದಾಗಿ ತಿಳಿಸಿದ್ದಾರೆ.ಇನ್ನೂ ಸರ್ಕಾರದ ನಿರ್ಧಾರದಿಂದ ಪಟಾಕಿ ಮಾರಾಟಾರರಿಗೆ ಮತ್ತು ಪಟಾಕಿ ಖರೀದಿಸಿದ್ದವರಿಗೆ ಶಾಕ್ ಉಂಟಾಗಿದೆ.


ರಾಜ್ಯ ಸರ್ಕಾರ ಪಟಾಕಿ ನಿಷೇಧ ಮಾಡಿರುವ ನಿರ್ಧಾರಕ್ಕೆ ಪರ ಹಾಗೂ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಪರಿಸರವಾದಿಗಳು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಆದರೆ ಸಂಪ್ರದಾಯವಾದಿಗಳು ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದಾರೆ.

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ.

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button