Follow Us On

Google News
Focus News
Trending

ಅರ್ಚಕರಿಗೆ ಸಿಗಲಿದೆ ಪಿಂಚಣಿ, ವಿಮಾ ಸೌಲಭ್ಯ: ಆದರೆ…

ರಾಜ್ಯದ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುವ ಅರ್ಚಕರು ಹಾಗೂ ಸಿಬ್ಬಂದಿಗಳಿಗೆ ಪಿಂಚಣಿ, ವಿಮಾ ಸೌಲಭ್ಯಗಳನ್ನು ನೀಡಲು ಸರ್ಕಾರ ಮುಂದಾಗಿದೆ. ರಾಜ್ಯದ ಸುಮಾರು 34,559 ದೇವಾಲಯಗಳು ಮುಜರಾಯಿ ಇಲಾಖೆಯ ಅಡಿಯಲ್ಲಿ ಬರಲಿದ್ದು, ಈ ಎಲ್ಲಾ ದೇವಾಲಯಗಳ ಅರ್ಚಕರು ಹಾಗೂ ಸಿಬ್ಬಂದಿಗಳಿಗೆ ಪಿಂಚಣಿ, ಆರೋಗ್ಯ ವಿಮೆ, ಜೀವ ವಿಮೆಯಂತಹ ಸೌಲಭ್ಯಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ.

ಇದುವರೆಗೂ ಅರ್ಚಕರು ಸೇರಿದಂತೆ ದೇವಾಲಯದ ಸಿಬ್ಬಂದಿಗೆ ಆರೋಗ್ಯ ವಿಮೆ ಅಥವಾ ನೌಕರರ ರಾಜ್ಯ ವಿಮೆ ಅಥವಾ ಭವಿಷ್ಯ ನಿಧಿಯಂತಹ ಇತರ ಸೌಲಭ್ಯಗಳು ಇರಲಿಲ್ಲ. ಇದೀಗ ಅರ್ಚಕರು ಹಾಗೂ ಸಿಬ್ಬಂದಿಗಳಿಗೆ ರೂ.5 ಲಕ್ಷ ಆರೋಗ್ಯ ವಿಮೆ ನೀಡಲು ನಿರ್ಧರಿಸಲಾಗಿದ್ದು, ಅರ್ಚಕರು ಹಾಗೂ ಸಿಬ್ಬಂದಿಗಳ ಕುಟುಂಬಗಳಿಗೂ ವಿಮಾ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ತಿಂಗಳ ಅಂತ್ಯದ ವೇಳೆಗೆ ಸರ್ಕಾರ ಈ ಯೋಜನೆಯನ್ನು ಪ್ರಕಟಿಸುವ ಸಾಧ್ಯತೆಗಳಿವೆ. ಇದಕ್ಕಾಗಿ ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ.

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button