Follow Us On

WhatsApp Group
Uttara Kannada
Trending

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಫಲಿತಾಂಶ ಪ್ರಕಟ

ಧಾರವಾಡ: ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರ ಗೆಲುವು ಸಾಧಿಸಿದ್ದಾರೆ.

ಇದೀಗ ಬಂದ ವರದಿಗಳ ಪ್ರಕಾರ ನಾಲ್ಕನೇ ಹಾಗೂ ಅಂತಿಮ ಸುತ್ತಿನ ಮತಗಳ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಸಂಕನೂರ ವಿಜೇತರಾಗಿರುವುದಾಗಿ ಚುನಾವಣಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಘೋಷಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಯಾದ ಎಸ್ ವಿ ಸಂಕನೂರು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕುಬೇರಪ್ಪ ಅವರ ಮಧ್ಯೆ ಹಣಾಹಣಿ ಏರ್ಪಟ್ಟಿತ್ತು. ಎಸ್ ವಿ ಸಂಕನೂರು 23857 ಮತಗಳನ್ನು ಪಡೆದರೆ, ಸಮೀಪದ ಕಾಂಗ್ರೆಸ್ ಅಭ್ಯರ್ಥಿ ಆರ್ ಎಂ ಕುಬೆರಪ್ಪ 12448, ಪಕ್ಷೇತರ ಅಭ್ಯರ್ಥಿ ಬಸವರಾಜ್ ಗುರಿಕರ್ 6188 ಮತಗಳನ್ನು ಪಡೆದುಕೊಂಡಿದ್ದಾರೆ.

ಒಟ್ಟು 52041 ಮತಗಳು ಚಲಾವಣೆಯಾಗಿದ್ದು, 43269 ಮತಗಳು ಸಿಂಧುವಾಗಿದ್ದರೆ 8772 ಮತಗಳು ಅಸಿಂಧುವಾಗಿವೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button