ಆ ಒಂದು ಟೋಪಿಯಿಂದ ಸಿಕ್ಕಿತು ಮಹತ್ವದ ಸುಳಿವು
ಕದ್ದ ಚಿನ್ನದೊಂದಿಗೆ ಊರಿಗೆ ಮರಳುತ್ತಿದ್ದ
ಕಾರವಾರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬಳ ಬ್ಯಾಗ್‌ನಿಂದ ಚಿನ್ನವನ್ನು ಕದ್ದು ಪರಾರಿಯಾಗಿದ್ದ ಕಳ್ಳನನ್ನು ಕಾರವಾರದಲ್ಲಿ ಬಂಧಿಸಲಾಗಿದೆ. ಮಹಿಳೆಯ ಬ್ಯಾಗ್ ನಲ್ಲಿದ್ದ ಸುಮಾರು 2 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ರೈಲ್ವೆ ಸುರಕ್ಷತಾ ದಳದ (ಆರ್.ಪಿ.ಎಫ್) ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಉಡುಪಿಯಿಂದ ಮುಂಬೈಗೆ ಹವಾನಿಯಂತ್ರಿತ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬಳ ಬ್ಯಾಗ್ ಬ್ಯಾಗ್ ಕಳುವಾಗಿತ್ತು. ತನ್ನ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ್ದ ಕಳುವಾದ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ತನಿಖೆ ಕೈಗೊಂಡ ಮಡಗಾಂವ್‌ನ ರೈಲ್ವೆ ಭದ್ರತಾ ದಳದ ಅಪರಾಧ ವಿಭಾಗದ ಇನ್‌ಸ್ಪೆಕ್ಟರ್ ವಿನೋದ್ ಕುಮಾರ್, ಸಿ.ಸಿ.ಟಿ.ವಿ ಕ್ಯಾಮೆರಾದ ದೃಶ್ಯಗಳನ್ನು ಪರಿಶೀಲಿಸಿದ್ದರು.
ಈ ವೇಳೆ, ಟೋಪಿ ಧರಿಸಿದ್ದ ವ್ಯಕ್ತಿಯ ಮೇಲೆ ಅನುಮಾನ ಬಂದಿತ್ತು. ಆತನ ಭಾವಚಿತ್ರವನ್ನು ಆರ್.ಪಿ.ಎಫ್ ಸಿಬ್ಬಂದಿಗೆ ಕಳುಹಿಸಿಕೊಡಲಾಗಿತ್ತು.ಬಳಿಕ ಇದೇ ವ್ಯಕ್ತಿ ಅದೇ ಟೋಪಿಯನ್ನು ಧರಿಸಿ ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿರುವುದನ್ನು ಆರ್.ಪಿ.ಎಫ್ ಸಿಬ್ಬಂದಿಗೆ ತಿಳಿದಿದೆ. ಕೂಡಲೇ ಈ ವೇಳೆ ಆತನನ್ನು ಬಂಧಿಸಲಾಗಿದೆ. ಕಳವು ಮಾಡಿದ ಚಿನ್ನಾಭರಣಗಳೊಂದಿಗೆ ತನ್ನ ಊರಿಗೆ ಮರಳುತ್ತಿದ್ದ ಎನ್ನಲಾಗಿದೆ. ಕೊಂಕಣ ರೈಲ್ವೆ ಪೊಲೀಸರು ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ
ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ.
ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.