ಉತ್ತರಕನ್ನಡದಲ್ಲಿ ಇಂದು 19 ಕೇಸ್: 35 ಮಂದಿ ಗುಣಮುಖ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 19 ಕರೊನಾ ಕೇಸ್ ದಾಖಲಾಗಿದೆ. ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ಪ್ರಕಟವಾದಂತೆ ಕಾರವಾರ 1, ಅಂಕೋಲಾ 6, ಶಿರಸಿ 3, , ಯಲ್ಲಾಪುರದಲ್ಲಿ 9 ಸೋಂಕಿತರು ಪತ್ತೆಯಾಗಿದ್ದಾರೆ. ಇದೇ ವೇಳೆ ಇಂದು 35 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕುಮಟಾದಲ್ಲಿ ಒಂದು ಕೇಸ್:

ಜಿಲ್ಲೆಯಲ್ಲಿ ಕರೊನಾ ಹರಡುವಿಕೆ ನಿಯಂತ್ರಣಕ್ಕೆ ಬರುತ್ತಿದ್ದು, ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಮುಖ ಕಂಡುಬರುತ್ತಿದೆ. ಕುಮಟಾ ತಾಲೂಕಿನಲ್ಲಿ ಇಂದು ಕೇವಲ ಒಂದು ಕರೊನಾ ಸೋಂಕಿತ ಪ್ರಕರಣ ಪತ್ತೆಯಾಗಿದೆ. ಕಳೆದ 2,3 ದಿನಗಳಿಂದ ಕುಮಟಾದಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲವಾಗಿದ್ದು, ಇಂದು ತಾಲೂಕಿನಲ್ಲಿ ಒಂದು ಕೇಸ್ ಕಂಡುಬoದಿದೆ. ದೇವಭಾಗದ 30 ವರ್ಷದ ಪುರುಷನಲ್ಲಿ ಸೋಂಕು ದೃಢಪಟ್ಟಿದೆ.

ಹೊನ್ನಾವರದಲ್ಲಿ ಯಾವುದೇ ಕೇಸ್ ಇಲ್ಲ:

ಹೊನ್ನಾವರ: ತಾಲೂಕಿನಲ್ಲಿ ಎರಡು ದಿನಗಳಿಂದ ಯಾವುದೇ ಕರೊನಾ ಪಾಸಿಟಿವ್ ಪ್ರಕರಣ ಕಾಣಿಸಿಕೊಳ್ಳದೆ ಇರುವುದರಿಂದ ಸಾರ್ವಜನಿಕರು ಸಂತಸದಿoದ ದಿಪಾವಳಿ ಆಚರಿಸುವಂತಾಗಿದೆ. ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಡಿಸ್ಚಾರ್ಜ್ ಆಗಿದ್ದಾರೆ. ವಿವಿಧ ಆಸ್ಪತ್ರೆಯಲ್ಲಿ 10 ಜನರು, ಮನೆಯಲ್ಲಿ 25 ಜನರು ಚಿಕಿತ್ಸೆ ಪಡೆಯುತ್ತಿದ್ದು, ತಾಲೂಕಾ ಆಸ್ಪತ್ರೆಯಲ್ಲಿ ಯ್ಯಾರೋಬ್ಬರು ಸಹ ಚಿಕಿತ್ಸೆ ಪಡೆಯುತ್ತಿಲ್ಲವಾಗಿದೆ.

ವಿಸ್ಮಯ ನ್ಯೂಸ್ ಯೋಗೇಶ ಮಡಿವಾಳ ಕುಮಟಾ ಮತ್ತು ಶ್ರೀಧರ ನಾಯ್ಕ ಹೊನ್ನಾವರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ.

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version