Big News
Trending

ಬೆಲ್ಟ್‌ನಿಂದ ಕುತ್ತಿಗೆಗೆ ಬಿಗಿದು ಸಾಯಿಸಿದ್ದರು

  • ಶಿರಸಿ ಕಡೆ ಪ್ರವಾಸ ಹೋಗುವ ನೆಪಮಾಡಿ ಶವವನ್ನು ಕಾಡಿನೊಳಗೆ ಒಯ್ದು, ಗುಂಡಿ ತೆಗೆದು ಮುಚ್ಚಿದ್ದರು
  • ಮೊಬೈಲ್‌ನ್ನು ಗೋವಾದಲ್ಲಿ ಸಮುದ್ರಕ್ಕೆ ಎಸೆದಿದ್ದರು
  • ತಾಯಿಯ ತಂಗಿಯ ಮಗನೇ ಆರೋಪಿ

ಮುಂಡಗೋಡ : ತಾಲ್ಲೂಕಿನ ಕಾತೂರ ಅರಣ್ಯ ಪ್ರದೇಶದಲ್ಲಿ ಏಳು ತಿಂಗಳ ಹಿಂದೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದ ಪ್ರಕರಣವನ್ನು ಇಲ್ಲಿನ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೊಂದು ಕೊಲೆ ಎಂದು ಗೊತ್ತಾಗಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಏಪ್ರಿಲ್ ತಿಂಗಳಲ್ಲಿ ಕಾತೂರ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ದೇಹದ ಭಾಗಗಳು ಎಲ್ಲೆಂದರಲ್ಲಿ ಬಿದ್ದಿದ್ದವು.


ಬಂಧಿತ ಪ್ರಮುಖ ಆರೋಪಿ ಅಭಿಷೇಕ್, ಕೊಲೆಯಾದ ಶ್ರೀನಿವಾಸನ ತಾಯಿಯ ತಂಗಿ ಮಗ. ಕೊಲೆ ಮಾಡಿದರೆ ಶ್ರೀನಿವಾಸ ಅವರ ಎಲ್ಲ ಆಸ್ತಿ ತನಗೇ ಸಿಗುತ್ತದೆ ಎಂಬ ದುರಾಸೆಯಿಂದ ಕೃತ್ಯ ರೂಪಿಸಿದ್ದ. ಇತರ ಆರೋಪಿಗಳ ಸಹಾಯದಿಂದ ಕೊಲೆ ಮಾಡಿದ್ದ ಎಂಬ ವಿಷಯ ಈಗ ಬೆಳಕಿಗೆ ಬಂದಿದೆ. ಶಿರಸಿ ಕಡೆ ಪ್ರವಾಸಕ್ಕೆ ಹೋಗುವ ನೆಪ ಮಾಡಿ, ನಾಗನೂರು ಸನಿಹದ ಅರಣ್ಯ ಪ್ರದೇಶದಲ್ಲಿ ಕಾರು ನಿಲ್ಲಿಸಿದ್ದರು. ನಂತರ ಬೆಲ್ಟ್ನಿಂದ ಕುತ್ತಿಗೆಗೆ ಬಿಗಿದು ಸಾಯಿಸಿದ್ದರು’ .


ಶವವನ್ನು ಬೈಕ್‌ನಲ್ಲಿ ಕಾಡಿನೊಳಗೆ ಒಯ್ದು, ಗುಂಡಿ ತೆಗೆದು ಮುಚ್ಚಿದ್ದರು. ಯಾರಿಗೂ ಸಂಶಯ ಬರದಿರಲಿ ಎಂದು, ಮೃತ ವ್ಯಕ್ತಿಯು ಸಂಬoಧಿಕರ ಊರಿಗೆ ಹೋಗಿದ್ದಾನೆ ಎಂದು ಸುಳ್ಳು ಹೇಳಿದ್ದರು. ಅಲ್ಲದೇ, ಕಾಣೆಯಾದ ಬಗ್ಗೆ ಎಲ್ಲಿಯೂ ಪ್ರಕರಣ ದಾಖಲಾಗದಂತೆ ನೋಡಿಕೊಂಡಿದ್ದರು. ಮೃತ ವ್ಯಕ್ತಿಯ ಮೊಬೈಲ್ ಅನ್ನು ಗೋವಾದಲ್ಲಿ ಸಮುದ್ರಕ್ಕೆ ಎಸೆದಿದ್ದರು’ ಎಂದು ತಿಳಿಸಿದರು.


ಹುಬ್ಬಳ್ಳಿ ನವನಗರದ ವರದರಾಜ ಶ್ರೀನಿವಾಸ ನಾಯಕ (32) ಕೊಲೆಯಾದವರು. ಹುಬ್ಬಳ್ಳಿ ಉಣಕಲ್ ಪ್ರದೇಶದ ಅಭಿಷೇಕ್ ಶೇಟ್, ತಾಜ್ ನಗರದ ಸುರೇಶ ನೂರಪ್ಪ ಲಮಾಣಿ, ರಾಮಕುಮಾರ ಕೃಷ್ಣ ತಾಟಿಸಮ್ಲಾ ಹಾಗೂ ಕಾತೂರ ಗ್ರಾಮದ ಬಸವರಾಜ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು, ಹೆಚ್ಚುವರಿ ಎಸ್.ಪಿ. ಎಸ್.ಬದರಿನಾಥ, ಶಿರಸಿ ಡಿ.ವೈ.ಎಸ್ಪಿ ಜಿ.ಟಿ.ನಾಯಕ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿತ್ತು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ.

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button