Big News
Trending

ಹೋರಿಗಳ ಓಟ-ಹಾರಾಟ! ಎಣ್ಣೆಕಂಬ ಸ್ಪರ್ಧೆ

ರೈತರ ಪಾಲಿನ ದೊಡ್ಡ ಹಬ್ಬ ಅಂದ್ರೆ ಅದು ದೀಪಾವಳಿ. ಬಲೀಂದ್ರನನ್ನು ತಂದು ಪೂಜೆ ಸಲ್ಲಿಸುವುದರ ಜತೆಗೆ ರೈತರ ಓಡನಾಡಿ ಗೋವುಗಳಿಗೂ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಮಾತ್ರವಲ್ಲದೆ ಗೋವುಗಳನ್ನು ಸೃಂಗರಿಸಿ ಅವುಗಳನ್ನು ಬೆದರಿಸುವ ಮೂಲಕ ಇಲ್ಲೊಂದು ಗ್ರಾಮದಲ್ಲಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ್ದು ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ.



ಒಂದೆಡೆ ಕಾಲ್ಕಿತ್ತು ಓಡುತ್ತಿರೋ ಹೋರಿಗಳು. ಇನ್ನೊಂದೆಡೆ ಅವುಗಳನ್ನು ಹಿಡಿಯಲು ಹರಸಾಹಸ ಪಡುತ್ತಿರೋ ಯುವಕರು, ಮತ್ತೊಂದೆಡೆ ಈ ಸಾಹಸಮಯ ದೃಶ್ಯಗಳನ್ನು ಕಣ್ಣುಂಬಿಕೊಳ್ಳುತ್ತಿರುವ ಸಾರ್ವಜನಿಕರು, ಅರೆ ಇದೇನೂ ಹೋರಿ ಓಡಿಸೊ ಸ್ಪರ್ಧೆ ಅಂಡ್ಕೊoಡ್ರಾ . . . ? ಖಂಡಿತಾ ಅಲ್ಲ . . . ! ರೈತರ ಪಾಲಿನ ದೊಡ್ಡಹಬ್ಬ ಎಂದೇ ಕರೆಸಿಕೊಳ್ಳುವ ದೀಪಾವಳಿ ಸಂಭ್ರಮ.



ಹೌದು, ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಮೂಡ್ನಳ್ಳಿ ಗ್ರಾಮದಲ್ಲಿ ಕಂಡುಬoದ ದೀಪಾವಳಿ ಸಂಭ್ರಮದ ದೃಶ್ಯಗಳಿವು. ರೈತರ ಪಾಲಿಗೆ ದೊಡ್ಡ ಹಬ್ಬ ಎಂದೇ ಕರಿಸಿಕೊಳ್ಳುವ ಹಬ್ಬವನ್ನು ಇಂದು ಊರಿನ ಜನರು ಅದ್ದೂರಿಯಾಗಿ ಆಚರಿಸಿದ್ರು. ಬಲೀಂದ್ರನನ್ನು ತಂದು ವಿಶೇಷ ಪೂಜೆ ಸಲಿಸಿದ ರೈತರು ಬಲಿಪಾಡ್ಯ ದಿನವಾದ ಇಂದು ಗೋವುಗಳಿಗೆ ಸಿಂಗಾರ, ರೊಟ್ಟಿ, ಪತ್ತೆತೆನ್ನೆ ಎಲೆಗಳಿಂದ ಮಾಡಿದ ದಂಡೆಗಳನ್ನು ಕಟ್ಟಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅವುಗಳನ್ನು ಚೌಲೂ, ಬಲೂನ್, ಬಾಸಿಂಗ ಸೇರಿದಂತೆ ಬಣ್ಣದ ಕಾಗದ ಹೂವುಗಳಿಂದ ಶೃಂಗರಿಸಿ ಬೆದರಿಸಲಾಯಿತು.

ಈ ಕುರಿತು ವಿಡಿಯೋ ನೋಡಲು ಈ ಕೆಳಗೆ ಕ್ಲಿಕ್ ಮಾಡಿ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ.

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

[sliders_pack id=”1487″]

Back to top button