Follow Us On

WhatsApp Group
Important
Trending

ಉತ್ತರಕನ್ನಡದಲ್ಲಿ 14 ಕರೊನಾ ‌ಕೇಸ್: ಇಬ್ಬರ ಸಾವು

ಹೊನ್ನಾವರ: ತಾಲೂಕಿನಲ್ಲಿ ಇಂದು ಐವರದಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. ಪಟ್ಟಣದಲ್ಲಿ 2 ಹಾಗೂ ಗ್ರಾಮೀಣ ಭಾಗದಲ್ಲಿ 3 ಸೋಂಕಿತ ಪ್ರಕರಣ ಪತ್ತೆಯಾಗಿದೆ. ಹೊನ್ನಾವರ ಪಟ್ಟಣದ ಪ್ರಭಾತನಗರದ 42 ವರ್ಷದ ಪುರುಷ, 20 ವರ್ಷದ ಯುವತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಗ್ರಾಮೀಣ ಭಾಗವಾದ ಹೊಸಾಕುಳಿಯಲ್ಲಿಯೇ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಹೊಸಾಕುಳಿಯ 42 ವರ್ಷದ ಮಹಿಳೆ, 52 ವರ್ಷದ ಮಹಿಳೆ ಮತ್ತು 80 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ.

ಕುಮಟಾದಲ್ಲಿ ನಾಲ್ಕು ಪಾಸಿಟಿವ್:

ಕುಮಟಾ: ತಾಲೂಕಿನಲ್ಲಿ ಇಂದು 4 ಜನರಲ್ಲಿ ಕರೊನಾ ಸೋಂಕು ದೃಢಪಟ್ಟಿದೆ. ತಾಲೂಕಿನ ಹೆಗಡೆ, ವಿವೇಕನಗರ, ಹೆಗಲೆ ಭಾಗದಲ್ಲಿ ಪ್ರಕರಣ ಪತ್ತೆಯಾಗಿದೆ. ಹೆಗಡೆಯ 32 ವರ್ಷದ ಪುರುಷ, ವಿವೇಕನಗರದ 55 ವರ್ಷದ ಮಹಿಳೆ, ಹೆಗಲೆಯ 39 ವರ್ಷದ ಪುರುಷ ಮತ್ತು ಕುಮಟಾದ 58 ವರ್ಷದ ಮಹಿಳೆಗೆ ಕರೊನಾ ಪಾಸಿಟಿವ್ ಬಂದಿದೆ. ಇಂದು 4 ಪ್ರಕರಣ ದಾಖಲಾದ ಬೆನ್ನಲ್ಲೇ ಕುಮಟಾ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 1927 ಕ್ಕೆ ಏರಿಕೆಯಾಗಿದೆ.

ಅಂಕೋಲಾದಲ್ಲಿಂದು ಕೊವಿಡ್ ಕೇಸ್ ಒಂದು : ಸಕ್ರಿಯ 22

ಅಂಕೋಲಾ : ತಾಲೂಕಿನಲ್ಲಿ ಮಂಗಳವಾರ 1 ಹೊಸ ಕೊವಿಡ್ ಕೇಸ್ ಪತ್ತೆಯಾಗಿದೆ. ಬೇಲೇಕೇರಿ ವ್ಯಾಪ್ತಿಯ 53ರ ಮಹಿಳೆಯಲ್ಲಿ ಸೋಂಕು ಲಕ್ಷಣಗಳು ಧೃಡಪಟ್ಟಿವೆ. ತಾಲೂಕಿನ ವಿವಿಧೆಡೆಯಿಂದ 31 ರ್ಯಾಟ್ ಮತ್ತು 138 ಆರ್‍ಟಿಪಿಸಿಆರ್ ಸೇರಿದಂತೆ ಒಟ್ಟೂ 169 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಸೋಂಕು ಮುಕ್ತರಾದ ಓರ್ವರನ್ನು ಬಿಡುಗಡೆಗೊಳಿಸಲಾಗಿದ್ದು, ಹೋಂ ಐಸೋಲೇಶನ್‍ನಲ್ಲಿರುವ 18 ಮಂದಿ ಸಹಿತ ಒಟ್ಟೂ 22 ಪ್ರಕರಣಗಳು ಸಕ್ರಿಯವಾಗಿದೆ.

ಯಲ್ಲಾಪುರದಲ್ಲಿ ಒಂದು ಕೇಸ್:

[sliders_pack id=”1487″]

ಯಲ್ಲಾಪುರ: ತಾಲೂಕಿನಲ್ಲಿ ಮಂಗಳವಾರ ಒಬ್ಬರಿಗೆ ಕರೊನಾ ಸೋಂಕು ಧೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 26 ಕ್ಕೆ ಏರಿಕೆಯಾಗಿದೆ. ಇಂದು ಆನಗೋಡಿನಲ್ಲಿ ಓರ್ವರಿಗೆ ಸೋಂಕು ತಗುಲಿದ್ದು, ಐವರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಯಲ್ಲಾಪುರದಲ್ಲಿ ಇಬ್ಬರ ಸಾವು:

ಉತ್ತರಕನ್ನಡದಲ್ಲಿ ಇಂದು 14 ಕರೊನಾ ಕೇಸ್ ದಾಖಲಾಗಿದೆ. ಶಿರಸಿ‌1, ಸಿದ್ದಾಪುರ 1, ಕಾರವಾರ 1, ಭಟ್ಕಳದಲ್ಲಿ ೦ ಕೇಸ್ ಕಾಣಿಸಿಕೊಂಡಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ13,252ಕ್ಕೆ‌ ಏರಿಕೆಯಾಗಿದೆ. ಇದೇ ವೇಳೆ ಇಂದು 21 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಯಲ್ಲಾಪುರದಲ್ಲಿ ಇಂದು ಇಬ್ಬರ ಸಾವಾಗಿದ್ದು,‌ ಸಾವಿನ ಸಂಖ್ಯೆ 177ಕ್ಕೆ ಏರಿಕೆಯಾಗಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ ಮತ್ತು ಯೋಗೇಶ್ ಮಡಿವಾಳ ಕುಮಟಾ, ವಿಲಾಸ ‌ನಾಯಕ ಅಂಕೋಲಾ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ
ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button