ಹಿಂಸಾತ್ಮಕವಾಗಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ
ಠಾಣೆಯಲ್ಲಿ ಪ್ರಕರಣ ದಾಖಲು
ಭಟ್ಕಳ : ಇತ್ತಿಚೆಗೆ ದನಕಳ್ಳತನ ಪ್ರಕರಣ ಹೆಚ್ಚುತ್ತಿದೆ. ಅಕ್ರಮವಾಗಿ ಗೋವುಗಳನ್ನು ಕದ್ದು ಮಾರಾಟ ಮಾಡುತ್ತಿರುವವರ ಸಂಖ್ಯೆ ದಿನೇ ದಿನೇ ಎಲ್ಲೆಡೆ ವರದಿಯಾಗುತ್ತಿದೆ. ಹೌದು, ಅಕ್ರಮವಾಗಿ ದನ ಸಾಗಾಟ ಮಾಡುತ್ತಿರುವ ಸಮಯದಲ್ಲಿ ಪೊಲೀಸರನ್ನು ನೋಡಿ ವಾಹನ ಬಿಟ್ಟು ಪರಾರಿಯಾಗಿರುವ ಘಟನೆ ಭಟ್ಕಳ ತಾಲೂಕಿನ ಮುಸಾಗರದ ವ್ಯಾಪ್ತಿಯಲ್ಲಿ ನಡೆದಿದೆ.
ಬೆಳಿಗ್ಗೆ 8.45ರ ಸುಮಾರಿಗೆ ಭಟ್ಕಳ ಶಹರದ ಮೂಸಾ ನಗರದ ಹತ್ತಿರ ಗೂಡ್ಸ್ ರಿಕ್ಷಾವೊಂದರಲ್ಲಿ ಯಾವುದೇ ಪಾಸ್ ಅಥವಾ ಪರ್ಮಿಟ್ ಇಲ್ಲದೆ ಅಕ್ರಮವಾಗಿ ವಧೆ ಮಾಡುವ ಉದ್ದೇಶದಿಂದ ಮೂರು ಆಕಳು ಹಾಗೂ ಒಂದು ಗೂಳಿಯನ್ನು ಹಿಂಸಾತ್ಮಕವಾಗಿ ಕಟ್ಟಿ ವಾಹನದಲ್ಲಿ ಹಾಕಿಕೊಂಡು ಸಾಗಿಸುತ್ತಿದ್ದರು. ಈ ವೇಳೆ ಪೋಲೀಸರನ್ನು ಕಂಡು ವಾಹನವನ್ನು ಸ್ಥಳದಲ್ಲೇ ಬಿಟ್ಟು ಆರೋಪಿ ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ.
ವಾಹನ ಬಿಟ್ಟು ಪರಾರಿಯಾದ ಆರೋಪಿ ತಜಿಂ ರೋಡ್ ಭಟ್ಕಳ ನಿವಾಸಿ ಇಸ್ಮಾಯಿಲ್ ಹವಾ ಎಂದು ತಿಳಿದು ಬಂದಿದೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ
[sliders_pack id=”1487″]ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ
ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.