
ಕಾರವಾರ : ಉತ್ತರ ಕನ್ನಡದಲ್ಲಿ ಇಂದು ಒಟ್ಟು 19 ಕರೊನಾ ಸೋಂಕಿತ ಪ್ರಕರಣ ಕಂಡುಬಂದಿದೆ. ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ದಾಖಲಾದಂತೆ ಕಾರವಾರ 03, ಭಟ್ಕಳ 1, ಸಿದ್ದಾಪುರ 7, ಯಲ್ಲಾಪುರ 2, ಮುಂಡಗೋಡ 2, ಹಳಿಯಾಳ ಒಂದು ಕೇಸ್ ದೃಢಪಟ್ಟಿದೆ. ಇದೇ ವೇಳೆ 32 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕಾರವಾರ 10, ಅಂಕೋಲಾ 4, ಕುಮಟಾ 4, ಹೊನ್ನಾವರ 4, ಶಿರಸಿ 2, ಯಲ್ಲಾಪುರ 6, ಹಳಿಯಾಳ ಇಬ್ಬರು ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಕುಮಟಾದಲ್ಲಿ ಒಂದು ಕೇಸ್:
ಕುಮಟಾ: ತಾಲೂಕಿನಲ್ಲಿ ಇಂದು ಒಂದು ಕೋವಿಡ್ ಪ್ರಕರಣ ದಾಖಲಾದೆ. ತಾಲೂಕಿನ ಪಟ್ಟಣ ವ್ಯಾಪ್ತಿಯಲ್ಲಿಯೇ 35 ವರ್ಷದ ಮಹಿಳೆಯಲ್ಲಿ ಸೊಂಕು ಕಂಡುಬಂದಿದೆ. ಇಂದು 1 ಪ್ರಕರಣ ದಾಖಲಾದ ಬೆನ್ನಲ್ಲೆ ಕುಮಟಾ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 1946 ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಇಂದು ಹೊನ್ನಾವರದಲ್ಲಿ ಯಾವುದೇ ಕೇಸ್ ದಾಖಲಾಗಿಲ್ಲ.
ವಿಸ್ಮಯ ನ್ಯೂಸ್ ನಾಗೇಶ್ ದೀವಗಿ,ಕುಮಟಾ ಮತ್ತು ವಿಲಾಸ ನಾಯಕ ಅಂಕೋಲಾ
- ಬೆಟ್ಟಿಂಗ್ ಭರಾಟೆ ಜೋರು : ಪ್ರತಿ ತಾಲೂಕಿನಲ್ಲಿ ಪೊಲೀಸ್ ಇಲಾಖೆಯಿಂದ ತೀವ್ರ ನಿಗಾ
- ಅಕ್ಕನ ಅಂತಿಮ ಕಾರ್ಯ ಮುಗಿಸಿಕೊಂಡು ಮನೆಗೆ ವಾಪಸಾಗುತ್ತಿದ್ದ ತಮ್ಮನ ದುರ್ಮರಣ: ಏನಾಯ್ತು ನೋಡಿ?
- ಕೇಣಿ ವಾಣಿಜ್ಯ ಬಂದರು ವಿರೋಧಿ ಹೋರಾಟ ಸಮಿತಿಯಿಂದ ಮಹತ್ವದ ಹೇಳಿಕೆ : ಮೀನುಗಾರಿಕಾ ಮಂತ್ರಿಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವರೇ ಖುದ್ದಾಗಿ ಬಂದು ಅಹವಾಲು ಆಲಿಸಲು ಆಗ್ರಹ
- ರೈತರಿಗೆ ಬೆಳೆವಿಮೆ ಕೊಡಿ: ಕಂಪೆನಿಗೆ ಕೇಂದ್ರದ ಖಡಕ್ ಆದೇಶ
- ಗೋವಿಂದಮೂರ್ತಿ ದೇವರ ವರ್ಧಂತಿ: ಗಮನಸೆಳೆದ “ಶ್ರೀನಿವಾಸ ಕಲ್ಯಾಣ” ಪೌರಾಣಿಕ ನಾಟಕ