ರಾಜ್ಯದಲ್ಲಿ ಗ್ರಾಮ ಪಂಚಾಯತ ಚುನಾವಣೆ ಯಾವಾಗ ಎನ್ನುವ ಕುತೂಹಲ ಜನರಲ್ಲಿತ್ತು. ಆದರೆ ಇದೀಗ ಚುನಾವಣಾ ಆಯೋಗ ಮೂಹೂರ್ತ ಪಿಕ್ಸ್ ಮಾಡಿದ್ದು, ಎಲ್ಲಾ ಕುತೂಹಲಕ್ಕೆ ತೆರೆಬಿದ್ದಿದೆ. ಡಿಸೆಂಬರ್ ಅಂತ್ಯದಲ್ಲಿ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. ಡಿಸೆಂಬರ್ 22 ಹಾಗೂ 27 ರಂದು ಎರಡು ಹಂತದಲ್ಲಿ ಗ್ರಾಮ ಪಂಚಾಯತ ಚುನಾವಣೆ ನಡೆಯಲಿದ್ದು, ಉತ್ತರಕನ್ನಡ ಜಿಲ್ಲೆಯಲ್ಲಿಯೂ ಸಹ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 7 ರಂದು ಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ.
ಮೊದಲ ಹಂತದ ಚುನಾವಣೆಯು ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳದಲ್ಲಿ ನಡೆಯಲಿದೆ. ಎರಡನೇ ಹಂತದ ಚುನಾವಣೆಗೆ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಹಳಿಯಾಳ, ದಾಂಡೇಲಿ, ಜೋಯ್ಡಾದಲ್ಲಿ ಮತದಾನ ನಡೆಯಲಿದೆ. ಕೆಲವು ಗ್ರಾಮಪಂಚಾಯತಿಗಳಿಗೆ ಚುನಾವಣೆ ನಡೆಯುತ್ತಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ. ಇಂದಿನಿAದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಡಿಸೆಂಬರ್ 11 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಡಿಸೆಂಬರ್ 14 ನಾಮಪತ್ರ ವಾಪಸ್ ಪಡೆದುಕೊಳ್ಳಲು ಕೊನೆಯದಿನವಾಗಿದೆ. ಡಿಸೆಂಬರ್ 30 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,