ಎಲ್ಲೆಲ್ಲಿ ಚುನಾವಣೆ ಇಲ್ಲ ನೋಡಿ
ಡಿ. 31 ರ ವರೆಗೆ ನೀತಿ ಸಂಹಿತೆ
ಕಾರವಾರ : ಜಿಲ್ಲೆಯಲ್ಲಿ ಡಿ.22 ಮತ್ತು 27 ರಂದು ಎರಡು ಹಂತಗಳಲ್ಲಿ ಗ್ರಾಮಪಂಚಾಯತ್ ಚುನಾವಣೆ ನಡೆಸಲಾಗುತ್ತಿದ್ದು, ಮೊದಲನೆಯ ಹಂತದ ಚುನಾವಣೆಗೆ ಡಿ.7 ರಿಂದ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ. ಅವರು ತಿಳಿಸಿದರು
ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಂಭಾಗಣದಲ್ಲಿ ಸೊಮವಾರ ಗ್ರಾಮಪಂಚಾಯತ್ ಚುನಾವಣೆ ಕುರಿತು ಪತ್ರಿಕಾಗೊಷ್ಠಿ ನಡೆಸಿ ಮಾತನಾಡಿ ಮೊದಲನೆಯ ಹಂತದ ಚುನಾವಣೆಗೆ ಜಿಲ್ಲೆಯ 5 ತಾಲೂಕುಗಳ 101 ಗ್ರಾಮಪಂಚಾಯತಗಳಲ್ಲಿ ಚುನಾವಣೆ ನಡೆಯಲಿದ್ದು, ಒಟ್ಟು 698 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಪ್ರತಿ 10-15 ಮತಗಟ್ಟೆಗಳಿಗೆ ಸೆಕ್ಟರ್ ಆಫೀಸರ್ ಮತ್ತು ಸೆಕ್ಟರ್ ಹೆಲ್ತ್ ರೆಗ್ಯುಲೆಟರ್, ಪ್ರತಿ ತಾಲೂಕಿಗೆ ಫ್ಲಾಯಿಂಗ್ ಸ್ಕ್ಯಾಡ್, ಪ್ರತಿ ತಾಲೂಕಿನಲ್ಲಿ ತಹಶೀಲ್ದಾರ್ ನೆತ್ರತ್ವದಲ್ಲಿ ಮಾದರಿ ನಿತಿಸಂಹಿತೆಯ ತಂಡವನ್ನು ರಚಿಸಲಾಗಿದ್ದು, ಈ ತಂಡದಲ್ಲಿ ತಾಲೂಕ್ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ, ಪೋಲಿಸ್ ವೃತ್ತ ನೀರಿಕ್ಷಕ ,ಪೋಲಿಸ್ ಸಬ್ ಇನ್ಸ್ಪೆಕ್ಟರ್ , ಕಂದಾಯ ನೀರಿಕ್ಷಕ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.
ಮೊದಲನೆ ಹಂತದ ಚುನಾವಣೆಗಾಗಿ ಡಿ.7 ಸೋಮುವಾರದಂದು ಚುನಾವಣೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಡಿ.11 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಡಿ.12 ರಂದು ನಾಮಪತ್ರಗಳನ್ನು ಪರಿಶೀಲಿಸುವ ದಿನವಾಗಿದ್ದರೆ ಡಿ.14 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ. ಡಿ.22 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಘಂಟೆಯವರಗೆ ಮತದಾನ ನಡೆಯಲಿದ್ದು ಡಿ. 30 ರಂದು ಆಯಾ ತಾಲೂಕ ಕೇಂದ್ರಗಳಲ್ಲಿ ಮತ ಎಣಿಕೆ ನಡೆಸಲಾಗುವುದೆಂದರು.
ಈ ಪಂಚಾಯತ್ ಗಳಲ್ಲಿ ಚುನಾವಣೆ ಇಲ್ಲ:
ಮೊದಲ ಹಂತದ ಚುನಾವಣೆಯಲ್ಲಿ ಕಾರವಾರ, ಅಂಕೋಲಾ ,ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ಗ್ರಾಮಪಂಚಾಯತಗಳಲ್ಲಿ ಚುನಾವಣೆ ನಡೆಸಲಾಗುತ್ತಿದೆ ಹೊನ್ನಾವರ ತಾಲೂಕಿನ ಗ್ರಾಮಪಂಚಾಯತಗಳ ಪೈಕಿ ಹೊನ್ನಾವರ ತಾಲೂಕಿನ (ಗುಳದಕೇರಿ)ಮಂಕಿ-ಎ (ಹಳೇಮಠ), ಮಂಕಿ ಬಿ (ಅನಂತವಾಡಿ) ಮತ್ತು ಮಂಕಿ-ಸಿ(ಚಿತ್ತಾರ) ಗ್ರಾಮ ಪಂಚಾಯತಗಳನ್ನು ಹೊರತುಪಡಿಸಿ ಚುನಾವಣೆ ನಡೆಸಲಾಗುವುದು. ಮಂಕಿ ಗ್ರಾಮಪಂಚಾಯತವನ್ನು ಪಟ್ಟಣ ಪಂಚಾಯತವನ್ನಾಗಿ ಮೇಲ್ರ್ದಜೆ ಎರಿಸಲು ಸರಕಾರವು ಅಧಿಸೂಚನೆ ಹೊರಡಿಸುವುದರಿಂದ ಚುನಾವಣೆಯನ್ನು ಆಯೋಗವು ಕೈ ಬಿಟ್ಟಿರುತ್ತದೆ ಎಂದು ತಿಳಿಸಿದರು.
ಡಿ.31 ವರೆಗೆ ನೀತಿಸಂಹಿತೆ
ಚುನಾವಣೆ ನಡೆಯುವ ಗ್ರಾಮಪಂಚಾಯತಿಯ ವ್ಯಾಪ್ತಿಯಲ್ಲಿ ಡಿ.31 ರ ವರೆಗೆ ನೀತಿಸಂಹಿತೆ ಜಾರಿಯಲ್ಲಿರುವುದು ಪಟ್ಟಣ ಪಂಚಾಯಿತಿ ಪುರಸಭೆ , ನಗರಸಭೆ ನಗರ ಪಾಲಿಕೆಯ ಪ್ರದೇಶಗಳಿಗೆ ಈ ನೀತಿಸಂಹಿತೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ವಿಸ್ಮಯ ನ್ಯೂಸ್ ಕಾರವಾರ