ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 12 ಕರೊನಾ ಕೇಸ್ ದಾಖಲಾಗಿದೆ. ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ಪ್ರಕಟವಾದಂತೆ ಶಿರಸಿಯಲ್ಲಿ 1, ಕಾರವಾರ 4, ಸೇರಿದಂತೆ ಜಿಲ್ಲೆಯಲ್ಲಿ 12 ಕೇಸ್ ಕಂಡುಬಂದಿದೆ. ಭಟ್ಕಳ, ಯಲ್ಲಾಪುರ, ಮುಂಡಗೋಡ, ಜೋಯ್ಡಾ, ಹಳಿಯಾಳದಲ್ಲಿ ಇಂದು ಯಾವುದೇ ಕೋವಿಡ್ ಪ್ರಕರಣ ಕಂಡುಬಂದಿಲ್ಲ. 113 ಸಕ್ರೀಯ ಪ್ರಕರಣಗಳಿದ್ದು, 86 ಸೋಂಕಿತರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ವೇಳೆ 17 ಮಂದಿ ವಿವಿಧ ಆಸ್ಪತ್ರೆಯಿಂದ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ.
ಕುಮಟಾದಲ್ಲಿ ಮೂರು ಕೇಸ್:
ಕುಮಟಾ: ತಾಲೂಕಾ ವ್ಯಾಪ್ತಿಯಲ್ಲಿ ಇಂದು ಒಟ್ಟು ಮೂರು ಕರೊನಾ ಸೋಂಕಿತ ಪ್ರಕರಣ ಪತ್ತೆಯಾಗಿದೆ. ತಾಲೂಕಿನ ಕಡ್ಲೆಓಣಿಯಲ್ಲಿ 1 ಪ್ರಕರಣ ಮತ್ತು ಪಟ್ಟಣ ಪ್ರದೇಶದಲ್ಲಿ 2 ಪ್ರಕರಣ ಪತ್ತೆಯಾಗಿದೆ. ಕಡ್ಲೆಓಣಿಯ 62 ವರ್ಷದ ಮಹಿಳೆ, ಕುಮಟಾದ 59 ವರ್ಷ ಮಹಿಳೆ ಮತ್ತು 60 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ. ಇಂದು 3 ಪ್ರಕರಣ ದಾಖಲಾದ ಬೆನ್ನಲ್ಲೆ ಕುಮಟಾ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 1962 ಕ್ಕೆ ಏರಿಕೆಯಾಗಿದೆ.
ಹೊನ್ನಾವರದಲ್ಲಿ ಶೂನ್ಯ:
ಹೊನ್ನಾವರ ತಾಲೂಕಿನಲ್ಲಿ ಇಂದು ಯಾವುದೇ ಕೇಸ್ ಕಾಣಿಸಿಕೊಂಡಿಲ್ಲ. ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್ ತೀವ್ರತೆ ಕಡಿಮೆಯಾಗುತ್ತಿದೆ. ಸಾರ್ವಜನಿಕರು ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿದ್ರೆ, ಕರೊನಾ ಸೋಂಕನ್ನು ನಿಯಂತ್ರಿಸಬಹುದಾಗಿದೆ.
ವಿಸ್ಮಯ ನ್ಯೂಸ್, ಕಾರವಾರ