ತೆಂಗಿನಕಾಯಿ ಕೊಯ್ಯುವ ವೇಳೆ ಮರದಿಂದ ಬಿದ್ದು ಸಾವು

ಹೊನ್ನಾವರ: ತೆಂಗಿನಮರ ಹತ್ತಿ ತೆಂಗಿನಕಾಯಿ ತೆಗೆಯುತ್ತಿರುವ ಸಮಯದಲ್ಲಿ ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಚಂದಾವರದಲ್ಲಿ ನಡೆದಿದೆ. ಚಂದಾವರದಲ್ಲಿ ಬೇರೆಯವರ ತೋಟದಲ್ಲಿ ತೆಂಗಿನಕಾಯಿ ತೆಗೆಯುತ್ತಿರುವ ಸಮಯದಲ್ಲಿ ಆಯಾ ತಪ್ಪಿ ಮರದಿಂದ ಕೆಳಗೆ ಬಿದ್ದ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿಯನ್ನು ಕಲ್ಲಬ್ಬೆ ನಾರಾಯಣ ಗೌಡ ಎಂದು ಗುರುತಿಸಲಾಗಿದೆ.

ಈತ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದ ಎನ್ನಲಾಗಿದ್ದು, ಮನೆಯವರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಹೊನ್ನಾವರ ಪೋಲಿಸರು ಭೇಟಿಕೊಟ್ಟು ಸ್ಥಳವನ್ನು ಪಂಚನಾಮೆ ಮಾಡಿದ್ದು, ಶವವನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ವಿಸ್ಮಯ ನ್ಯೂಸ್, ಹೊನ್ನಾವರ

[sliders_pack id=”1487″]

ಸೆಲ್ಕೋ ಸೋಲಾರ್ ದೀಪ ಬಳಸಿ, ನಿಮ್ಮ ಮನೆ ಬೆಳಗಿಸಿ

ಸೌರಶಕ್ತಿ ಅಂದರೆ ಕೇವಲ ಬೆಳಕಲ್ಲ
ಅದು ಸ್ವಾವಲಂಬಿ ಬದುಕಿಗೂ ದಾರಿ
ಇದು ಸೆಲ್ಕೋ ಸಂಸ್ಥೆಯ ಗುರಿ
ಸಂಪರ್ಕಿಸಿ: ದತ್ತಾರಾಮ ಭಟ್ಟ, ಮ್ಯಾನೇಜರ್
ಸೆಲ್ಕೋ ಸೋಲಾರ್, ಸನ್ಮಾನ ಹೊಟೇಲ್ ಹತ್ತಿರ
N.H 66, ಕುಮಟಾ
9880003735/9449360181

Exit mobile version