
ಮಾನಸಿಕ ಅಸ್ವಸ್ಥಗೊಂಡಿದ್ದ ಯುವಕ
ಪೊಲೀಸರಿಗೆ ಧನ್ಯವಾದ ತಿಳಿಸಿದ ಪೋಷಕರು
ಶಿರಸಿ: ಸತ್ತೆ ಹೋಗಿದ್ದ ಎಂದುಕೊoಡಿದ್ದ ಮಗ ಮನೆಗೆ ಬಂದಾಗ, ತಂದೆ-ತಾಯಿಯ ಸಂತೋಷಕ್ಕೆ ಪಾರವೇ ಇರಲಿಲ್ಲ. ಹೌದು, ಹೆತ್ತ ಮಗ ಸತ್ತೆ ಹೋದ ಅಂತ ಹೆತ್ತವರು ಕಣ್ಣೀರು ಹಾಕುತ್ತಿರುವಾಗಲೇ, ಪೊಲೀಸರು ಮಗನನ್ನು ಹುಡುಕಿ, ನೋಂದ ಪೋಷಕರ ಬಾಳದಲ್ಲಿ ಮಂದಹಾಸ ಮೂಡಿಸಿದ್ದಾರೆ. ಪ್ರಶಾಂತ್ ಚೆಂದ್ರಶೆಟ್ಟಿ ಎನ್ನುವವನು ಒಂದು ತಿಂಗಳ ಹಿಂದೆ ಮಾನಸಿಕ ಅಸ್ವಸ್ಥನಾಗಿ ಶಿರಸಿಯ ಹಲವೆಡೆ ಸುತ್ತಾಡುತ್ತಿದ್ದ. ಇದನ್ನು ಗಮನಿಸಿದ ಶಿರಸಿಯ ಪೊಲೀಸರು, ಆತನನ್ನು ಧಾರವಾಡದ ಮಾನಸಿಕ ಆಸ್ಪತ್ರೆಗೆ ಸೇರಿಸಿದ್ದರು.
ತಿಂಗಳುಗಳ ಕಾಲ ಚಿಕಿತ್ಸೆಯ ಬಳಿಕ ಮಾನಸಿಕ ಅಸ್ವಸ್ಥಗೊಂಡಿದ್ದ ಯುವಕ ಚೇತರಿಸಿಕೊಂಡಿದ್ದಾನೆ. ಆರೋಗ್ಯ ಚೇತರಿಕೆ ಕಂಡ ಬಳಿಕ ತಂದೆ-ತಾಯಿಯ ಹೆಸರು, ವಿಳಾಸ ತಿಳಿಸಿದ್ದಾರೆ. ಈ ವಿಷಯ ತಿಳಿದ ಪಾಲಕರು, ಮಗನನ್ನು ನೋಡಲು ಕೂಡಲೇ ಆಗಮಿಸಿದ್ದಾರೆ. ಪೊಲೀಸರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮಗನನ್ನು ಮತ್ತೆ ನೋಡುವಂತೆ ಮಾಡಿದಕ್ಕೆ ಧನ್ಯವಾದ ಸಲ್ಲಿಸಿದರು.
ವಿಸ್ಮಯ ನ್ಯೂಸ್, ಶಿರಸಿ
[sliders_pack id=”1487″]ಇದನ್ನೂ ಓದಿ: ಪ್ರಮುಖ ಸುದ್ದಿಗಳು
- Job: ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಉದ್ಯೋಗಾವಕಾಶ: ಇಂದೇ ಸಂಪರ್ಕಿಸಿ
- ಇಸ್ರೆಲ್ ನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ: 1 ಲಕ್ಷದ 70 ಸಾವಿರ ಸಂಬಳ
- ಏಪ್ರಿಲ್ 12 ರಂದು ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ ಶಿಪ್ ಪ್ರವೇಶಾತಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯುವ ಸುವರ್ಣಾವಕಾಶ
- ಭಟ್ಕಳದ ಬೈಲೂರಿನಲ್ಲಿ ವಾತ್ಸಲ್ಯ ಮನೆ ಹಸ್ತಾಂತರ: ಸಂಸ್ಥೆಯ ಸಮಾಜಮುಖಿ ಕೆಲಸಕ್ಕೆ ಮೆಚ್ಚುಗೆ
- ಬೇಸಿಗೆ ರಜೆ ನಿಮಿತ್ತ 20 ದಿನಗಳ ಸಂಗೀತ ಸಂಸ್ಕಾರ ಶಿಬಿರ