
ಗೋಕರ್ಣ: ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು , ಶ್ರೀರಾಮಚಂದ್ರಾಪುರಮಠ, ಇವರ ದಿವ್ಯ ಮಾರ್ಗದರ್ಶನದಲ್ಲಿ ದಿನಾಂಕ 14-12 -2020 ಸೋಮವಾರ ಕಾರ್ತೀಕ ಅಮಾವಾಸ್ಯೆಯಂದು ಶಾರ್ವರಿ ಸಂವತ್ಸರದ ರಂಗಪೂಜೆ (ಎಡೆ ಅಮಾವಾಸ್ಯೆ) ಉತ್ಸವ, ರಥೋತ್ಸವ ಸಂಪನ್ನಗೊoಡಿತು.
ಅರ್ಚಕರಾದ ವೇ.ಮೂ. ಸಾಂಬ ಭಟ್ ಷಡಕ್ಷರಿ ಇವರು ಪೂಜಾ ಕೈಂಕರ್ಯ ನೆರವೇರಿಸಿದರು. ಉಪಾಧಿವಂತ ಮಂಡಳದ ಸದಸ್ಯರು ಹಾಗೂ ಶ್ರೀ ದೇವಾಲಯದ ಆಡಳಿತಾಧಿಕಾರಿಗಳಾದ ಶ್ರೀ ಜಿ.ಕೆ.ಹೆಗಡೆ ಉಪಸ್ಥಿತರಿದ್ದರು. ಶ್ರೀದೇವರಿಗೆ 108 ಎಡೆ ವಿಶೇಷ ಭಕ್ಷ್ಯ ನೈವೇದ್ಯ ಸಲ್ಲಿಸಲಾಯಿತು. ಪೂಜೆಯ ನಂತರ ದೇವಾಲಯದಲ್ಲಿ ಸೇವೆ ಸಲ್ಲಿಸುವ ವಿವಿಧ ಸಮಾಜದ ಕಾರ್ಯಕರ್ತರಿಗೆ ಎಡೆ ಪ್ರಸಾದವನ್ನು ವಿತರಿಸಲಾಯಿತು.
ವಿಸ್ಮಯ ನ್ಯೂಸ್, ಗೋಕರ್ಣ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ
- ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ
- ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ವಸತಿ ಸೌಲಭ್ಯ, ಆಕರ್ಷಕ ಸಂಬಳ
- ನಾಟಿ ವೈದ್ಯ ಬೆಳಂಬಾರದ ಹನುಮಂತಗೌಡರ ಮನೆಯಲ್ಲಿ ಹತ್ತು ಸಾವಿರ ಧನ್ವಂತರಿ ಜಪ, ಹೋಮಹವನ: ಸಮಸ್ತ ಜನರ ಆರೋಗ್ಯ ಸೌಭಾಗ್ಯಕ್ಕೆ ಪ್ರಾರ್ಥನೆ
- ಉಗ್ರರ ದಾಳಿ ಬಳಿಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುತ್ತಿರುವ ವ್ಯಾಪಾರಿಗಳು, ರೈತರು: ವೀಳ್ಯದೆಲೆ ರಪ್ತು ಮಾಡುವುದಿಲ್ಲ ಎಂದ ಬೆಳೆಗಾರರು