ಮಾಹಿತಿ
Trending

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಾರ್ಯದರ್ಶಿಯಾಗಿ ಎಸ್ ಎಸ್ ನಕುಲ್ ನೇಮಕ

ದಕ್ಷ ಅಧಿಕಾರಿ ಎಂದೇ ಖ್ಯಾತರಾಗಿದ್ದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರ ಕಾರ್ಯದರ್ಶಿಯಾಗಿ ನಿಯೋಜನೆಗೊಂಡಿದ್ದಾರೆ. ಈ ಸಂಬoಧ ಕೇಂದ್ರದ ಮಾನವ ಸಂಪನ್ಮೂಲ ಇಲಾಖೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಅವರನ್ನು ಬಿಡುಗಡೆಗೊಳಿಸುವಂತೆ ತಿಳಿಸಿದೆ. ಹೌದು, 2010ನೇ ಬ್ಯಾಚ್ ಐಎಎಸ್ ಅಧಿಕಾರಿ ಮತ್ತು ಪ್ರಸ್ತುತ ಬಳ್ಳಾರಿ ಜಿಲ್ಲಾಧಿಕಾರಿಯಾಗಿರುವ ಎಸ್. ಎಸ್. ನಕುಲ್ ಕೇಂದ್ರ ಸೇವೆಗೆ ತೆರಳಲಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆಪ್ತ ಕಾರ್ಯದರ್ಶಿಯಾಗಿ ಅವರು ನೇಮಕಗೊಂಡಿದ್ದಾರೆ.

ಉತ್ತರ ಕನ್ನಡದ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ, ಇಲ್ಲಿನ ಜನರ ಮೆಚ್ಚುಗೆ ಗಳಿಸಿದ್ದರು. ಬಳಿಕ 2019ರ ಜನವರಿಯಿಂದ ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಜನಿಸಿದ ಎಸ್. ಎಸ್. ನಕುಲ್ ತಮ್ಮ ಆಡಳಿತದ ವೈಖರಿ ಮೂಲಕವೇ ಪ್ರಸಿದ್ಧಿ ಪಡೆದಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಓ ಆಗಿದ್ದಾಗ ಪತ್ನಿಯನ್ನು ಹೆರಿಗೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದರು.


ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button