
ಜೇನುನೋಣಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ
ಕೊನೆಗೂ ಚಿಕಿತ್ಸೆ ಫಲಿಸಲೇ ಇಲ್ಲ
ಕುಮಟಾ: ತೋಟದಲ್ಲಿ ಕೆಲಸಮಾಡುತ್ತಿದ್ದ ವೇಳೆ ಜೇನುನೋಣಗಳ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ತದಡಿಯಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ತದಡಿಯ ರಮೇಶ್ ನಾಯ್ಕ ಎನ್ನುವವರು ತಮ್ಮ ತೋಟದಲ್ಲಿ ಎಂದಿನoತೆ ಕೆಲಸ ಕಾರ್ಯದಲ್ಲಿ ತೊಡಗಿದ್ದರು. ಆದ್ರೆ, ಈ ವೇಳೆ ಏಕಾಏಕಿ ಜೇನುನೋಣಗಳು ತೋಟಕ್ಕೆ ದಾಳಿ ಮಾಡಿ, ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಮಾರಣಾಂತಿಕವಾಗಿ ಗಾಯಗೊಳಿಸಿತ್ತು.
ವಿಷಯ ತಿಳಿದ ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ, ಆಸ್ಪತ್ರೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದಾನೆ. ಜೇಣುನೋಣಗಳು ಕಚ್ಚಿದ ಪರಿಣಾಮ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ವ್ಯಕ್ತಿ ಇಹಲೋಕ ತ್ಯಜಿಸಿದ್ದಾನೆ.
ವಿಸ್ಮಯ ನ್ಯೂಸ್, ಕುಮಟಾ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- Job: ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಉದ್ಯೋಗಾವಕಾಶ: ಇಂದೇ ಸಂಪರ್ಕಿಸಿ
- ಇಸ್ರೆಲ್ ನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ: 1 ಲಕ್ಷದ 70 ಸಾವಿರ ಸಂಬಳ
- ಏಪ್ರಿಲ್ 12 ರಂದು ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ ಶಿಪ್ ಪ್ರವೇಶಾತಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯುವ ಸುವರ್ಣಾವಕಾಶ
- ಭಟ್ಕಳದ ಬೈಲೂರಿನಲ್ಲಿ ವಾತ್ಸಲ್ಯ ಮನೆ ಹಸ್ತಾಂತರ: ಸಂಸ್ಥೆಯ ಸಮಾಜಮುಖಿ ಕೆಲಸಕ್ಕೆ ಮೆಚ್ಚುಗೆ
- ಬೇಸಿಗೆ ರಜೆ ನಿಮಿತ್ತ 20 ದಿನಗಳ ಸಂಗೀತ ಸಂಸ್ಕಾರ ಶಿಬಿರ