ನೈಟ್ ಕರ್ಪ್ಯೂ ಜಾರಿ: ರಾತ್ರಿ ಓಡಾಡುವಂತಿಲ್ಲ

ಬೆoಗಳೂರು: ಕರೊನಾ ರೂಪಾಂತರ ವೈರಸ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬುಧವಾರ ರಾತ್ರಿಯಿಂದಲೇ ನೈಟ್ ಕರ್ಪ್ಯೂ ಜಾರಿಯಾಗಲಿದೆ. ರಾತ್ರಿ 10 ಗಂಟೆಯಿoದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಪ್ಯೂ ಇರಲಿದೆ. ಈ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಇಂದಿನಿoದ 9 ದಿನಗಳ ಕಾಲ ನೈಟ್ ಕರ್ಫ್ಯೂ ಇರಲಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಇರಲಿದೆ. ಜನವರಿ 2ರವರೆಗೂ ರಾತ್ರಿ ರ್ಫ್ಯೂ ಇರುವುದರಿಂದ ಹೊಸ ರ್ಷದ ಮಧ್ಯರಾತ್ರಿ ಆಚರಣೆಗೆ ಸಹಜವಾಗಿಯೇ ಕಡಿವಾಣ ಇರಲಿದೆ.

ರಾತ್ರಿ 9 ರನಂತರ ಬಸ್ ಸಂಚಾರ ಇರೋದಿಲ್ಲ. ಹೋಟೆಲ್, ರೆಸ್ಟೋರೆಂಟ್‌ಗಳೂ ಬಂದ್ ಆಗಲಿವೆ. ವ್ಯಾಪಾರ, ವಹಿವಾಟಗಳೂ ನಡೆಯುವುದಿಲ್ಲ. ಅಗತ್ಯ ವಸ್ತುಗಳ ಸರಬರಾಜು ಮಾಡುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಇರಲಿದೆ. ಹಾಗೇ ಇಂದು ಸಂಜೆ 5 ಗಂಟೆಯೊಳಗೆ ನೈಟ್ ಕರ್ಪ್ಯೂ ಸಂಬoಧಿತ ಮರ್ಗಸೂಚಿಯನ್ನು ರಾಜ್ಯ ರ್ಕಾರ ಬಿಡುಗಡೆ ಮಾಡಲಿದೆ.ವಿದೇಶದಿಂದ ಆಗಮಿಸುವ ಪ್ರತಿಯೊಬ್ಬರಿಗೂ ಕೋವಿಡ್ ಸೋಂಕು ಪರೀಕ್ಷೆ ಕಡ್ಡಾಯವಾಗಿದ್ದು, ಎಲ್ಲೆ ಪ್ರಯಾಣಿಸಲಿ, ಈ ಕುರಿತ ಪ್ರಮಾಣ ಪತ್ರವನ್ನು ಹೊಂದುವುದು ಅಗತ್ಯವಾಗಿದೆ. ರಾಜ್ಯಕ್ಕೆ ಆಗಮಿಸುವ 72 ಗಂಟೆಗಳಿಗೆ ಮುನ್ನ ಆರ್.ಟಿ,ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು ಎಂದರು.

ಹೊರದೇಶದಿoದ ಬರುವ ಪ್ರಯಾಣಿಕರಿಗಾಗಿ ವಿಮಾನ ನಿಲ್ದಾಣದಲ್ಲಿಯೂ ಸೋಂಕು ಪತ್ತೆಗೆ ಪರೀಕ್ಷಾ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಗ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಿ ಇದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Exit mobile version