
ಕಬ್ಬಿಣದ ರಾಡ್ ನಿಂದ ಬಾಗಲು ಮುರಿದರು
ಪೊಲೀಸರಿಗೆ ಲಭಿಸಿದೆ ಮಹತ್ವದ ಸುಳಿವು
ಕಾರವಾರ: ಚಿನ್ನದ ಅಂಗಡಿಯೊoದಕ್ಕೆ ಕನ್ನ ಹಾಕಿದ ದುಷ್ಕರ್ಮಿಗಳು, ಲಕ್ಷಾಂತರ ಮೌಲ್ಯದ ಬೆಳ್ಳಿಯ ಆಭರಣ ದೋಚಿದ ಘಟನೆ ತಾಲೂಕಿನಲ್ಲಿ ನಡೆದಿದೆ. ಕಬ್ಬಿಣದ ರಾಡ್‌ನಿಂದ ಜ್ಯುವೆಲರಿಯ ಬಾಗಿಲು ಮುರಿದ ಕಳ್ಳರು, ಮೊದಲು ಅಂಗಡಿಯ ಒಳಗಿದ್ದ ಸಿಸಿ ಕ್ಯಾಮರಾವರನ್ನು ತಿರುಗಿಸಿದ್ದಾರೆ. ಅಲ್ಲದೆ ಅದಕ್ಕೆ ಬಟ್ಟೆ ಕಟ್ಟಿ ತಾವು ಮಾಡುತ್ತಿರುವ ದುಷ್ಕೃತ್ಯ ಸೆರೆಯಾಗದಂತೆ ನೋಡಿಕೊಂಡಿದ್ದಾರೆ. ಹೌದು, ಕಬ್ಬಿಣದ ರಾಡ್‌ನಿಂದ ಬಾಗಿಲು ಮುರಿದು ಒಳ ಪ್ರವೇಶಿಸಿದ ಕಳ್ಳರ ಗುಂಪು ಅಂಗಡಿಯಲ್ಲಿದ್ದ ಬೆಳ್ಳಿಯ ವಸ್ತುಗಳನ್ನು ದೋಚಿದೆ. ಆದರೆ, ಕಳ್ಳರು ಎಷ್ಟೆ ಚಾಲಾಕಿಯಾಗಿದ್ದರು, ಹಲವು ಮಹತ್ವದ ಸುಳಿವು ಪೊಲೀಸರಿಗೆ ಸಿಕ್ಕಿದೆ.
ಪೊಲೀಸರು ಅಂಗಡಿಯ ಸುತ್ತಮುತ್ತದ ಪ್ರದೇಶವನ್ನು ಪರಿಶೀಲಿಸಿದ್ದು, ಇಲ್ಲಿಯ ಸಿಸಿಟಿವಿ ಫುಟೇಜ್ ಕಲೆಹಾಕಿದ್ದಾರೆ. ಈ ವೇಳೆ ಕಳ್ಳರ ಕುರಿತು ಮಹತ್ವದ ಸುಳಿವು ದೊರೆತಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- Job: ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಉದ್ಯೋಗಾವಕಾಶ: ಇಂದೇ ಸಂಪರ್ಕಿಸಿ
- ಇಸ್ರೆಲ್ ನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ: 1 ಲಕ್ಷದ 70 ಸಾವಿರ ಸಂಬಳ
- ಏಪ್ರಿಲ್ 12 ರಂದು ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ ಶಿಪ್ ಪ್ರವೇಶಾತಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯುವ ಸುವರ್ಣಾವಕಾಶ
- ಭಟ್ಕಳದ ಬೈಲೂರಿನಲ್ಲಿ ವಾತ್ಸಲ್ಯ ಮನೆ ಹಸ್ತಾಂತರ: ಸಂಸ್ಥೆಯ ಸಮಾಜಮುಖಿ ಕೆಲಸಕ್ಕೆ ಮೆಚ್ಚುಗೆ
- ಬೇಸಿಗೆ ರಜೆ ನಿಮಿತ್ತ 20 ದಿನಗಳ ಸಂಗೀತ ಸಂಸ್ಕಾರ ಶಿಬಿರ