
ಬೆಂಗಳೂರು: ಬ್ರಿಟನ್‌ನಲ್ಲಿ ರೂಪಾಂತರಿತ ಕರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಜನವರಿ 2 ರ ತನಕ ನೈಟ್ ಕರ್ಪ್ಯೂ ಎಂದು ಸರ್ಕಾರ ಘೋಷಿಸಿತ್ತು. ಇದಕ್ಕೂ ಮೊದಲು ನಿನ್ನೆಯಿಂದಲೇ ಜಾರಿ ಎಂದಿತ್ತಾದರೂ, ಬಳಿಕ ಅದರಿಂದ ಹಿಂದೆ ಸರಿದಿತ್ತು. ಇಂದು ಮತ್ತೆ ನಿನ್ನೆಯ ತೀರ್ಮಾನದಿಂದಲೂ ಹಿಂದೆ ಸರಿದಿರುವ ರಾಜ್ಯ ಸರ್ಕಾರ, ನೈಟ್ ಕರ್ಫ್ಯೂ ಇರಲ್ಲ ಎಂದು ಸ್ಪಷ್ಟಪಡಿಸಿದೆ.
ಸಾರ್ವಜನಿಕರು ಸ್ವಯಂ ನಿರ್ಭಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿರುವುದಿಷ್ಟು – ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕರ್ಪ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು. ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ನೈಟ್ ಕರ್ಫ್ಯೂ ಅಗತ್ಯವಿಲ್ಲವೆಂಬಂತಹ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ನೈಟ್ ಕರ್ಫ್ಯೂ ಹಿಂಪಡೆಯಲು ತೀರ್ಮಾನಿಸಲಾಗಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ
- ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ
- ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ವಸತಿ ಸೌಲಭ್ಯ, ಆಕರ್ಷಕ ಸಂಬಳ
- ನಾಟಿ ವೈದ್ಯ ಬೆಳಂಬಾರದ ಹನುಮಂತಗೌಡರ ಮನೆಯಲ್ಲಿ ಹತ್ತು ಸಾವಿರ ಧನ್ವಂತರಿ ಜಪ, ಹೋಮಹವನ: ಸಮಸ್ತ ಜನರ ಆರೋಗ್ಯ ಸೌಭಾಗ್ಯಕ್ಕೆ ಪ್ರಾರ್ಥನೆ
- ಉಗ್ರರ ದಾಳಿ ಬಳಿಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುತ್ತಿರುವ ವ್ಯಾಪಾರಿಗಳು, ರೈತರು: ವೀಳ್ಯದೆಲೆ ರಪ್ತು ಮಾಡುವುದಿಲ್ಲ ಎಂದ ಬೆಳೆಗಾರರು