Trending
ಗೆಳೆಯರ ಜೊತೆ ಪ್ರವಾಸಕ್ಕೆ ಬಂದವ ಹೆಣವಾಗಿ ಮರಳಿದ

ಕುಮಟಾ: ಸಮುದ್ರದಲ್ಲಿ ಈಜಲು ತೆರಳಿದ ಸಂದರ್ಭದಲ್ಲಿ ವ್ಯಕ್ತಿಯೋರ್ವ ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿದ ಘಟನೆ ತಾಲೂಕಿನ ಗೋಕರ್ಣದ ಕುಡ್ಲೆ ಕಡಲ ತೀರದಲ್ಲಿ ನಡೆದಿದೆ. ಕೇರಳ ಮೂಲದ ವಿಶ್ವನಾಥ (30) ಮೃತ ವ್ಯಕ್ತಿ. ಈತ ಪ್ರವಾಸಕ್ಕೆಂದು ಗೋಕರ್ಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಗೆಳೆಯರ ಜೊತೆ ಸಮುದ್ರಲ್ಲಿ ಈಜಲು ತೆರಳಿದ್ದ. ಸಮುದ್ರದ ಈಜುತ್ತಿರುವಾಗ ಅಲೆಗಳ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಗೋಕರ್ಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶವವನ್ನು ಸಾಗಿಸಲಾಗಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಗೋಕರ್ಣ
[sliders_pack id=”1487″]ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಶ್ರೀನಿವಾಸ ಕಾಂಪ್ಲೆಕ್ಸ್ ನಲ್ಲಿ ಸುಸಜ್ಜಿತ 2 ಮಳಿಗೆಗಳು ಬಾಡಿಗೆಗೆ ಇದೆ
- ಗಮನಸೆಳೆಯುತ್ತಿದೆ ಅಂಕೋಲಾದ ಶ್ರೀ ಸಿಗಂಧೂರೇಶ್ವರಿ ಟೆಕ್ಸ್ ಟೈಲ್ : 200 ರಿಂದ ಹಿಡಿದು 8 ಸಾವಿರ ಮೌಲ್ಯದ ವಿವಿಧ ಬಗೆ ಬಗೆಯ ಸೀರೆಗಳು
- ಕರಾವಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಸಾವು
- SSLC ಯಲ್ಲಿ ಸಾಧನೆ ಮಾಡಿದ ರೈತ ಕುಟುಂಬದ ಕನ್ನಡದ ಕುವರಿಗೆ ಇಂಜಿನೀಯರ್ ಆಗೋ ಕನಸು: ಹೆಸರಿಗೆ ತಕ್ಕಂತೆ ಇದೆ ಗ್ರಾಮೀಣ ಭಾಗದ ಆದರ್ಶ ಪ್ರೌಢಶಾಲೆ
- ಯುದ್ಧ ಸಿದ್ಧತೆ ಹಿನ್ನಲೆ: ಉಪವಾಸ ಸತ್ಯಾಗ್ರಹ ಮುಂದಕ್ಕೆ