ಕಾರವಾರ: ಹಳೆಯ ವೈಷಮ್ಯದ ಹಿನ್ನಲೆಯಲ್ಲಿ ವ್ಯಕ್ತಿಯೊರ್ವ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ತಾಲೂಕಿನಲ್ಲಿ ನಡೆದಿದೆ. ಹಲ್ಲೆಯ ಹಿನ್ನಲೆಯಲ್ಲಿ ಯುವಕನ ತಲೆಯ ಎರಡು ಕಡೆ ಗಂಭೀರ ಗಾಯವಾಗಿದೆ. ಸದ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ನಾಟಕ ಕಲಾವಿದ ದೀಪಕ ಹಳದೀಪುರ ಎಂದು ಗುರುತಿಸಲಾಗಿದೆ.
ಹಲ್ಲೆ ಮಾಡಿದವನನ್ನು ತಾಲೂಕಿನ ದೇವಳಮಕ್ಕಿ ನಿವಾಸಿ ಎಂದು ಗುರುತಿಸಲಾಗಿದೆ. ಪೊಲೀಸರು ಈತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೇವಳಮಕ್ಕಿಯ ನಿವಾಸಿ ಮತ್ತು ದೀಪಕ ಹಳದೀಪುರ ಈ ಇಬ್ಬರ ಮಧ್ಯೆ ಮೊದಲಿನಿಂದಲೂ ವೈಷಮ್ಯವಿತ್ತು ಎನ್ನಲಾಗಿದೆ. ದೀಪಕ ಹಳದೀಪುರ ಮೇಲೆ ಇದೇ ವ್ಯಕ್ತಿ ಈ ಹಿಂದೆಯೂ ಎರಡು ಬಾರಿ ಹಲ್ಲೆ ನಡೆಸಿದ್ದ ಎಂಬ ಮಾಹಿತಿ ದೊರೆತಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಮದುವೆ ಆಗುತ್ತಿಲ್ಲವೇ? ಉದ್ಯೋಗ ಸಮಸ್ಯೆಯೇ? ಇಲ್ಲಿದೆ ಪರಿಹಾರ
ದೈವಜ್ಞ ವಿದ್ಯಾಭೂಷಣ ಪ್ರಶಸ್ತಿ ವಿಜೇತರು, ದುರ್ಗಾದೇವಿ ಉಪಾಸಕರಾದ ಪಂಡಿತ ಶ್ರೀ ವಿ.ರಾಘವೇಂದ್ರ ರಾವ್ ಶಾರ್ಮಾ ಅವರು ಕೆಲವೇ ದಿನಗಳಲ್ಲಿ ಈ ಸಮಸ್ಯೆಗಳಿಗೆ ಮುಕ್ತಿ ನೀಡುತ್ತಾರೆ. ಇವರು ಕಾಶಿಯಲ್ಲಿ ಜ್ಞಾನ ತಪಸ್ಸಿನಿಂದ ಯಂತ್ರ-ಮಂತ್ರ-ವಾಕ್ಯಸಿದ್ಧಿ-ಸಂಪಾದಿಸಿದ್ದು, ನೀವು ದೂರವಾಣಿ ಮೂಲಕ ಸಂಪರ್ಕಿಸಿ, ಪರಿಹಾರ ಕಂಡುಕೊಳ್ಳಬಹುದು. ಕೂಡಲೇ ಸಂಪರ್ಕಿಸಿ: 9440269990