Follow Us On

Google News
Uttara Kannada
Trending

ಮಹಿಳೆಯನ್ನು ತಪ್ಪಿಸಲು ಹೋಗಿ ರಸ್ತೆಪಕ್ಕದ ಕಾಲುವಿಗೆ ಉರುಳಿದ ಕಾರ್

ಮುಂಡಗೋಡ: ಪಾದಚಾರಿ ಮಹಿಳೆಯನ್ನು ತಪ್ಪಿಸಲು ಹೋಗಿ ಕಾರು ರಸ್ತೆಪಕ್ಕದ ಕಾಲುವಿಗೆ ಕಾರ್ ಬಿದ್ದ ಘಟನೆ ತಾಲೂಕಿನಲ್ಲಿ ನಡೆದಿದೆ. ಶಿರಸಿ ಹುಬ್ಬಳ್ಳಿ ರಸ್ತೆಯಲ್ಲಿ ಮಹಿಳೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಎದುರಿನಲ್ಲಿ ವಾಹನ ಬಂದ ಪರಿಣಾಮ ಮಹಿಳೆಯನ್ನು ತಪ್ಪಿಸಲು ಹೋಗಿ ಟಿಪ್ಪರ್ ಗೆ ಕಾರ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ರಸ್ತೆಯ ಪಕ್ಕದ ಕಾಲುವೆಯಲ್ಲಿ ಕಾರ್ ಬಿದ್ದಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಸಾರ್ವಜನಿಕ ಸ್ಥಳದಲ್ಲಿ ಗಾಂಜಾಸೇವನೆ: ಆರು ಮಂದಿ ಬಂಧನ

ಗೋಕರ್ಣ: ಕುಡ್ಲೆ ಸಮುದ್ರತೀರದಲ್ಲಿ ಸಾರ್ವಜನಿಕರ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಸೇವನೆ ಮಾಡುತ್ತಿದ್ದ ಆರು ಮಂದಿಯನ್ನು ಕುಮಟಾ ಕರಾವಳಿ ಕಾವಲು ಪಡೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೂ ಮಂದಿ ತಮಿಳುನಾಡಿನವರು ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳು ಉಮಾಮಹೇಶ್ವರದ ದೇವಾಲಯದ ಸಮೀಪ ಗಾಂಜಾ ಸೇವನೆ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಇವರು ಚೆನ್ನೈನಿಂದ ಗಾಂಜಾ ತಂದಿದ್ದರು ಎಂಬ ಮಾಹಿತಿ ದೊರೆತಿದೆ. ಬಂಧಿತರು ಗಾಂಜಾ ಸಾಗಾಟಕ್ಕೆ ಬಳಸಿದ ಕಾರು, ಬೈಕ್, ಆರು ಮೊಬೈಲ್ ಅನ್ನು ಪೊಲೀರು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

ಮದುವೆ ಆಗುತ್ತಿಲ್ಲವೇ? ಉದ್ಯೋಗ ಸಮಸ್ಯೆಯೇ? ಇಲ್ಲಿದೆ ಪರಿಹಾರ

ದೈವಜ್ಞ ವಿದ್ಯಾಭೂಷಣ ಪ್ರಶಸ್ತಿ ವಿಜೇತರು, ದುರ್ಗಾದೇವಿ ಉಪಾಸಕರಾದ ಪಂಡಿತ ಶ್ರೀ ವಿ.ರಾಘವೇಂದ್ರ ರಾವ್ ಶಾರ್ಮಾ ಅವರು ಕೆಲವೇ ದಿನಗಳಲ್ಲಿ ಈ ಸಮಸ್ಯೆಗಳಿಗೆ ಮುಕ್ತಿ ನೀಡುತ್ತಾರೆ. ಇವರು ಕಾಶಿಯಲ್ಲಿ ಜ್ಞಾನ ತಪಸ್ಸಿನಿಂದ ಯಂತ್ರ-ಮ0ತ್ರ-ವಾಕ್ಯಸಿದ್ಧಿ-ಸ0ಪಾದಿಸಿದ್ದು, ನೀವು ದೂರವಾಣಿ ಮೂಲಕ ಸಂಪರ್ಕಿಸಿ, ಪರಿಹಾರ ಕಂಡುಕೊಳ್ಳಬಹುದು. ಕೂಡಲೇ ಸಂಪರ್ಕಿಸಿ: 9440269990

Back to top button