ಯಲ್ಲಾಪುರ: ಬಿರು ಬೇಸಿಗೆ ನಡುವೆಯೂ ಏಕಾಏಕಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿರುವ ಘಟನೆ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರದಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಏಕಾಏಕಿ ಮೋಡ ಕವಿದು ಒಂದು ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ಪಟ್ಟಣದಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿತ್ತು. ಅನಿರೀಕ್ಷಿತ ಮಳೆಯಿಂದಾಗಿ ಪಟ್ಟಣದಲ್ಲಿ ವ್ಯಾಪಾರಸ್ಥರು ಸಮಸ್ಯೆ ಅನುಭವಿಸುವಂತಾಯಿತು.
ಗ್ರಾಮೀಣ ಭಾಗದಲ್ಲಿಯೂ ಜಿಟಿ ಜಿಟಿ ಮಳೆಯಾಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.ಇನ್ನು ಕಳೆದ ಎರಡು ದಿನಗಳಿಂದ ಉತ್ತರಕನ್ನಡ ಜಿಲ್ಲೆಯಾದ್ಯಂತ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಘಟ್ಟದ ಮೇಲ್ಬಾಗದ ಶಿರಸಿ, ಸಿದ್ದಾಪುರಗಳಲ್ಲಿ ಎರಡು ದಿನಗಳ ಕಾಲ ಸುರಿದ ಮಳೆಯಿಂದಾಗಿ ಭತ್ತ ಹಾಗೂ ಅಡಿಕೆ ಕೊಯ್ಲಿನಲ್ಲಿ ನಿರತರಾಗಿದ್ದ ರೈತರು ಸಾಕಷ್ಟು ಸಮಸ್ಯೆ ಅನುಭವಿಸುವಂತಾಯಿತು. ಶಿರಸಿಯಲ್ಲೂ ಮಧ್ಯಾಹ್ನ ಸುಮಾರಿಗೆ ಹಲವೆಡೆ ಮಳೆಯಾಗಿದ್ದು, ರೈತರ ಆತಂಕಕ್ಕೆ ಕಾರಣವಾಗಿದೆ. ಗೊಣವೆ ಹಾಕದ ಭತ್ತದ ಬುಡದಲ್ಲಿ ನೀರು ನುಗ್ಗಿ ಭತ್ತ ಹಾಳಾಗುವ ಸ್ಥಿತಿಗೆ ತಲುಪಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್